ರಾಜ್ಯ

ಧಾರವಾಡದ ಖಾಸಗಿ ಆಸ್ಪತ್ರೆಗಳಲ್ಲಿ ಶೇ.೫೦ ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲು




ಧಾರವಾಡ prajakiran.com : ಕೋವಿಡ್-೧೯ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವುದರಿಂದ ಸರ್ಕಾರಿ ಆಸ್ಪತ್ರೆಗಳು ಹಾಗೂ ಕಿಮ್ಸ್ ಜೊತೆಗೆ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳೂ ಕೂಡಾ ತಮ್ಮಲ್ಲಿರುವ ಒಟ್ಟು ಹಾಸಿಗೆಗಳ ಸಾಮರ್ಥ್ಯದ ಶೇ.೫೦ ರಷ್ಟು ಕೋವಿಡ್ ಚಿಕಿತ್ಸೆಗೆ ಮೀಸಲಿಡಲು ಒಪ್ಪಿಗೆ ನೀಡಿವೆ.

 ಜಿಲ್ಲಾಡಳಿತ ಅಂತಹ ಆಸ್ಪತ್ರೆಗಳಿಗೆ ಅಗತ್ಯ ಸಹಕಾರ ನೀಡಲಿದೆ. ಇಂದಿನಿಂದಲೇ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪ್ರಾರಂಭವಾಗಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯನ್ನುದ್ಧೇಶಿಸಿ ಮಾತನಾಡಿ, ಕೊರೊನಾ ನಿಯಂತ್ರಣ ಕಾರ್ಯವನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ ಈ ಸಾಂಕ್ರಾಮಿಕ ವೈರಾಣುವನ್ನು ತಡೆಯಲು ಖಾಸಗಿ ಆಸ್ಪತ್ರೆಗಳ ಸಹಕಾರ ಕೂಡಾ ಮುಖ್ಯವಾಗಿದೆ ಎಂದರು.



ಅವಳಿ ನಗರದಲ್ಲಿ ೧೮ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಲಾಗಿದೆ. ಎಲ್ಲಾ ಆಸ್ಪತ್ರೆಗಳು ತಮ್ಮಲ್ಲಿರುವ ಒಟ್ಟು ಹಾಸಿಗೆಗಳು, ಐಸಿಯು ಹಾಗೂ ವೆಂಟಿಲೇಟರ್‌ಗಳ ಮಾಹಿತಿಯನ್ನು ಒದಗಿಸಿವೆ.

ಇವುಗಳಲ್ಲಿ ಶೇ.೫೦ ರಷ್ಟನ್ನು ಕೋವಿಡ್ ಚಿಕಿತ್ಸೆಗೆ ಒದಗಿಸಬೇಕು. ರೋಗ ಲಕ್ಷಣ ಇರುವವರನ್ನು ಮತ್ತು ಸಾಮಾನ್ಯ ಜ್ವರ ಇರುವವರನ್ನು ಈ ಆಸ್ಪತ್ರೆಗಳಿಗೆ ದಾಖಲಿಸಲಾಗುವುದು.



ಸಾರ್ವಜನಿಕ ವಲಯದ ಆಸ್ಪತ್ರೆಯಿಂದ ಶಿಫಾರಸ್ಸುಗೊಂಡು ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳು ಬಂದರೆ ಅವರಿಗೆ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ನೀಡಬೇಕು.

ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳು ದಾಖಲಾದರೆ ಅದರ ವೆಚ್ಚವನ್ನು ರೋಗಿಗಳೇ ಭರಿಸುತ್ತಾರೆ.

ಕೋವಿಡ್ ರೋಗಿಗಳ ಚಿಕಿತ್ಸೆ ಮತ್ತು ಆಕಸ್ಮಿಕವಾಗಿ ಕೋವಿಡ್‌ನಿಂದ ಮೃತಪಡುವ ವ್ಯಕ್ತಿಗಳ ಪಾರ್ಥಿವ ಶರೀರದ ನಿರ್ವಹಣೆ ಕುರಿತು ಮಾರ್ಗದರ್ಶನ ಅಗತ್ಯವಿರುವ ಆಸ್ಪತ್ರೆಗಳು ತಮ್ಮ ವೈದ್ಯರು ಮತ್ತು ಸಿಬ್ಬಂದಿಗಳನ್ನು ಕಿಮ್ಸ್ಗೆ ನಿಯೋಜಿಸಿ ಒಂದು ದಿನ ತರಬೇತಿ ಪಡೆಯಬಹುದು. ಕಿಮ್ಸ್ ವೈದ್ಯರು ಮತ್ತು ಸಿಬ್ಬಂದಿಯ ತಂಡ ಮಾರ್ಗದರ್ಶನ ನೀಡಲಿದೆ ಎಂದರು.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *