ಮಂಗಳೂರು prajakiran.com : ತುಳು ಸಿನಿಮಾ ರಂಗದ ಯುವ ನಿರ್ದೇಶಕ ರಘು ಶೆಟ್ಟಿ (39) ಶನಿವಾರ ಹೃದಯಾಘಾತದಿಂದ ಮರಣ ಹೊಂದಿದ್ದಾರೆ.
“ಅರ್ಜುನ್ ವೆಡ್ಸ್ ಅಮೃತ” ಎಂಬ ತುಳು ಚಿತ್ರವನ್ನು ನಿರ್ದೇಶಿಸಿದ್ದ ರಘು ಶೆಟ್ಟಿ, ಖಾಸಗಿ ವಾಹಿನಿಯಲ್ಲಿ ಉದ್ಯೋಗ ಮಾಡುತ್ತಿದ್ದರು.
ಅಷ್ಟೇ ಅಲ್ಲದೇ ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮವನ್ನೂ ನಡೆಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ರಘು ಶೆಟ್ಟಿ ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮರಣ ಹೊಂದಿದ್ದು, ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.