ನವದೆಹಲಿ prajakiran.com : ಕೊರೋನಾ ಇಡೀ ದೇಶವನ್ನೇ ನಲುಗಿಸುತ್ತಿದೆ.
ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆಯೇ ಭಾರತೀಯ ರೈಲ್ವೆ ಇಲಾಖೆಯ 93 ಸಾವಿರ ಸಿಬ್ಬಂದಿಗೆ ಸೋಂಕು ತಗುಲಿದೆ.
ಈ ಕುರಿತು ರೈಲ್ವೆ ಮಂಡಳಿ ಅಧ್ಯಕ್ಷ ಹಾಗೂ ಸಿಇಒ ಸುನೀತ್ ಶರ್ಮಾ ಮಾಹಿತಿ ನೀಡಿದ್ದಾರೆ.
ರೈಲ್ವೆ ಇಲಾಖೆಯ ಸುಮಾರು 93 ಸಾವಿರ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಈ ಸೋಂಕಿತರಿಗಾಗಿ 72 ಆಸ್ಪತ್ರೆಗಳಲ್ಲಿ 5000 ಹಾಸಿಗೆಗಳನ್ನು ಮೀಸಲಿರಿಸಲಾಗಿದೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ.
ಇದು ಭಾರತೀಯ ರೈಲ್ವೆಇಲಾಖೆಗೆ ಅತಿ ದೊಡ್ಡ ಸವಾಲಾಗಿದೆ. ಇರುವ ಸಂಪನ್ಮೂಲಗಳನ್ನು ಬಳಸಿಕೊಂಡು ಈ ಸವಾಲನ್ನು ಹೇಗೆ ನಿರ್ವಹಿಸುತ್ತೇವೆ ಎಂಬುದು ಮುಖ್ಯವಾಗಿದೆ ಎಂದಿದ್ದಾರೆ.
ಎಲ್ಲ ರೈಲ್ವೆ ಸಿಬ್ಬಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗುತ್ತಿದೆ.
12 ಲಕ್ಷ ಸಿಬ್ಬಂದಿ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ದೇಶಕ್ಕೆ ಸೇವೆ ಸಲ್ಲಿಸುವುದು ನಮ್ಮ ಆದ್ಯ ಕರ್ತವ್ಯ ಎಂದಿದ್ದಾರೆ.