ರಾಜ್ಯ

ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ ವಿಧಿವಶ

ಯಾದಗಿರಿ prajakiran.com : ಸುರಪುರದ ಹಿರಿಯ ರಾಜಕಾರಿಣಿ ಮಾಜಿ ಸಚಿವ ರಾಜಾ ಮದನಗೋಪಾಲನಾಯಕ ಅವರು ಸೋಮವಾರ ಕಲಬುರಗಿಯ ಇಎಸ್ಐ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 

ವಾರದ ಹಿಂದೆ ಅವರಿಗೆ ಕರೋನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಅವರನ್ನು ಕಲಬುರಗಿಯ ಇಎಸ್ಐ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ರಾಜಾ ಮದನಗೋಪಾಲ ನಾಯಕ ಅವರು 1983ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪ್ರಥಮ ಬಾರಿಗೆ ಗೆಲುವು ಸಾಧಿಸಿದರು.

ನಂತರ 1985 ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸಿ ವೀರಪ್ಪ ಮೋಯ್ಲಿ ಅವರ ಸಚಿವ ಸಂಪುಟದಲ್ಲಿ ಕೃಷಿ ಸಚಿವರಾಗಿದ್ದರು.

ನಂತರ 1989 ರಲ್ಲಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ರಾಯಚೂರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಕೇವಲ 501 ಮತಗಳ ಅಂತರದಿಂದ ಸೋಲು ಅನುಭವಿಸಿದರು.

ಆನಂತರ ಕಾಂಗ್ರೆಸ್ ತೊರೆದು ಬಿಜೆಪಿಯಿಂದ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಅನುಭವಿಸಿದರು.

ರಾಜಾ ಮದನಗೋಪಾಲ ನಾಯಕ ಅವರು ಕ್ರೀಡೆ ಹಾಗೂ ಸಾಹಿತ್ಯ ಚಟುವಟಿಕೆಯಲ್ಲಿ ಹೆಚ್ಚಿನ ಆಸ್ತಕಿ ಹೊಂದಿದ್ದ ಅವರು ಸುರಪುರದ ಕನ್ನಡ ಸಾಹಿತ್ಯ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಮತ್ತು ರಿಕ್ರೇಯೆಷನ್ ಕ್ಲಬ್ ಅಧ್ಯಕ್ಷರಾಗಿದ್ದರು.

ಶೋಕ ಸಂತಾಪ :  ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ ಅವರ ನಿಧನಕ್ಕೆ ಶಾಸಕ ರಾಜೂಗೌಡ, ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ, ಜಿಪಂ ಅಧ್ಯಕ್ಷರಾದ ಬಸನಗೌಡ ಯಡಿಯಾಪೂರ, ಹೆಚ್ ಸಿ ಪಾಟೀಲ, ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಡಾ. ಸುರೇಶ ಸಜ್ಜನ,ಕಸಾಪ ಅಧ್ಯಕ್ಷ ಶ್ರೀನಿವಾಸ ಜಾಲವಾದಿ, ಪ್ರಕಾಶ ಅಂಗಡಿ, ಹಾಸ್ಯ ಕಲಾವಿದ ಬಸವರಾಜ ಮಹಾಮನಿ, ಶಾಂತಪ್ಪ ಬೂದಿಹಾಳ, ಬಸವರಾಜಪ್ಪ ಜಮದಾರಖಾನ, ರಾಜಶೇಖರ ದೇಸಾಯಿ, ಮಂಜು ಗುಳಗಿ, ಕರ್ನಾಟಕ ಜರ್ನ್ ಲಿಸ್ಟ್ ಯೂನಿಯನ್ ನ ಜಿಲ್ಲಾ ಘಟಕ ತಾಲೂಕು ಘಟಕ ಸೇರಿದಂತೆ ಅನೇಕರು ಶೋಕ ಸಂತಾಪ ವ್ಯಕ್ತ ಪಡಿಸಿದ್ದಾರೆ.

ವರದಿ : ರಾಘವೇಂದ್ರ ಮಾಸ್ತರ, ಯಾದಗಿರಿ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *