ರಾಜ್ಯ

ಮಾಜಿ ಸಂಸದ ರಾಜಾ ರಂಗಪ್ಪ ನಾಯಕ್ ನಿಧನ

ರಾಯಚೂರು prajakiran.com : ರಾಯಚೂರು ಜಿಲ್ಲೆಯ ಮಾಜಿ ಸಂಸದ ರಾಜಾರಂಗಪ್ಪ ನಾಯಕ್ ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಅವರಿಗೆ 61 ವರ್ಷ ವಯಸ್ಸಾಗಿತ್ತು.

ಅವರು ಯಾದಗಿರಿ ಜಿಲ್ಲೆಯ ಸುರಪುರದ ವಸಂತ ಮಹಲ್ ನಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಇವರು 1996ರಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ, ರಾಯಚೂರು ಜಿಲ್ಲೆಯ ಸಂಸದರಾಗಿದ್ದರು.

ಆನಂತರ ಬದಲಾದ ರಾಜಕೀಯ ಬೆಳವಣಿಗೆಯಿಂದಾಗಿ ಇವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಅವರಅಂತ್ಯಕ್ರಿಯೆಯನ್ನು ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *