ಧಾರವಾಡ prajakiran.com : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಆಗಸ್ಟ್ ೦೫, ೨೦೨೦ ರಂದು ಬುಧವಾರ ನೆರವೇರಲಿದೆ.
ಭೂಮಿಪೂಜೆ ಶಿಲಾನ್ಯಾಸ ಕಾರ್ಯಕ್ರಮ ಸರಾಗವಾಗಿ ನೆರವೇರುವಂತೆ ಹಾಗೂ ಪ್ರಭು ಶ್ರೀರಾಮಚಂದ್ರನ ಮಂದಿರವು ಮಂಗಳಕರವಾಗಿ ಪೂರ್ಣಗೊಳ್ಳುವಂತೆ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಹಾಗೂ ಖಾಸಗಿ ದೇವಾಲಯಗಳಲ್ಲಿ ಅಂದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.