ಅಂತಾರಾಷ್ಟ್ರೀಯ

ರಾಮನಗರದ ರಾಮ ದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ

ಹಾವೇರಿ ಪ್ರಜಾಕಿರಣ. ಕಾಮ್ ಫೆ19 : ರಾಮನಗರದ ರಾಮ ದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಆಗೇ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಶಿಗ್ಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಮದೇವರ ಬೆಟ್ಟ ಐತಿಹಾಸಿಕವಾದುದು. ಹೊಸ ರಾಮಮಂದಿರ ನಿರ್ಮಾಣ ಮಾಡಬೇಕೆಂದು ಹಲವಾರು ಜನರ ಇಚ್ಛೆಯಾಗಿತ್ತು. ನನ್ನ ಪ್ರಕಾರ ಯಾರೂ ಇದಕ್ಕೆ ವಿರೋಧ ಮಾಡುವುದಿಲ್ಲ. ವಿರೋಧ ಮಾಡುವವರು ವಿರೋಧಿಸಲಿ. ನನ್ನ ತಕಾರಾರಿಲ್ಲ ಎಂದರು.

*ಮಾತಿಗೆ ತಪ್ಪಿದ ಮಗ*
ಕಾಂಗ್ರೆಸ್ ಅವರು ಇಷ್ಟು ದಿನ ಜನರ ಕಿವಿಗೆ ಹೂವಿಟ್ಟಿದ್ದರು. ಸಿದ್ದರಾಮಯ್ಯ ಅವರು ಮಾತಿಗೆ ತಪ್ಪಿದ ಮಗ. ಬಜೆಟ್ ನಲ್ಲಿ ಹೇಳಿದ್ದ ಯಾವುದನ್ನೂ ಅನುಷ್ಠಾನ ಮಾಡಿಲ್ಲ. ಮೊದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದರು. ಆಮೇಲೆ ಅದನ್ನು 4 ಕೆಜಿಗೆ ಇಳಿಸಿದರು. ಚುನಾವಣೆ ಸಮಯದಲ್ಲಿ 7 ಕೆಜಿಗೆ ಏರಿಸಿದರು. ಹೀಗೆ ಜನರನ್ನು ಯಾಮಾರಿಸಿದ್ದಾರೆ. ಅವರಿಗೆ ಜನ ಶಾಶ್ವತವಾಗಿ ಹೂವಿಡುವ ಕೆಲಸವಾಗುತ್ತದೆ ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *