ಬೆಂಗಳೂರು prajakiran.com : ಡಿವೈಡರ್ ಹಾರಿ ಬಂದು ಗ್ಯಾಸ್ ಲಾರಿಗೆ ಕಾರು ಡಿಕ್ಕಿಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪ ಸಂಭವಿಸಿದೆ.
ಲಾರಿಗೆ ಮುಖಾಮುಖಿಯಾಗಿ ಗುದ್ದಿದ್ದರ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲೆ ಇಬ್ಬರ ದುರ್ಮರಣನ್ನಪ್ಪಿದ್ದರೆ, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಾವಿಕೆರೆ ಬಳಿಯ ಮಂಗಳೂರು ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 75 ರ ರಸ್ತೆಯಲ್ಲಿ ಈ ರ್ದುಘಟನೆ ನಡೆದಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.