ರಾಜ್ಯ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧ ರೇಪ್ ಕೇಸ್

ಚಿತ್ರದುರ್ಗ ಪ್ರಜಾಕಿರಣ.ಕಾಮ್ : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧ ರೇಪ್ ಕೇಸ್ ದಾಖಲಾಗಿದೆ.

ಸಿಪಿಐ ಜಿ.ಬಿ. ಉಮೇಶ್ ತನಗೆ ಸಹಾಯ ಮಾಡುವ ನೆಪದಲ್ಲಿ
ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆ ದೂರಿದ್ಧಾರೆ.

ಈ ಕುರಿತು ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 ವರ್ಷದ ಹಿಂದೆ ದಾವಣಗೆರೆಯಲ್ಲಿ ಇನ್ಸ್​ಪೆಕ್ಟರ್ ಆಗಿದ್ದ ಉಮೇಶ್, ನಿವೇಶನ ಕುರಿತ ಸಮಸ್ಯೆ ಹಿನ್ನೆಲೆಯಲ್ಲಿ ಉಮೇಶ್​ ಬಳಿ ಸಹಾಯ ಕೇಳಿದ್ದರು.
ಆಗ ಈತ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯುವತಿ ಈ ಹಿಂದೆ ಶಿವಮೊಗ್ಗದಲ್ಲಿ ಓದುತ್ತಿರುವಾಗಲೂ ಅತ್ಯಾಚಾರ ಮಾಡಿದ್ದ ಎಂದು ಆರೋಪಿಸಲಾಗಿದೆ.

ಸಿಪಿಐ ಉಮೇಶ್​ ಈಗಾಗಲೇ ಇಬ್ಬರನ್ನ ಮದುವೆಯಾಗಿದ್ದ.

ಅಲ್ಲದೆ, ನೀನು 3ನೇ ಹೆಂಡ್ತಿ ತರ ಇರು ಎಂದು ಯುವತಿಗೆ ಉಮೇಶ್​ ಒತ್ತಡ ಹಾಕುತ್ತಿದ್ದವೆಂದು ದೂರಿನಲ್ಲಿ ವಿವರಿಸಿದ್ದಾಳೆ.

ಜೊತೆಗೆ ಯುವತಿ ಹಾಗೂ ಪೋಷಕರಿಗೂ ಉಮೇಶ್​ ಪ್ರಾಣ ಬೆದರಿಕೆ ಹಾಕಿದ್ಧಾರೆ ಎನ್ನಲಾಗಿದೆ.

ಉಮೇಶ್​ ವಿರುದ್ಧ ಕಲಂ 376 ಕ್ಲಾಸ್ (2)(k)(n), 323 ,504, 506 ಐಪಿಸಿ ಅಡಿ ಪ್ರಕರಣ ದಾಖಲಾಗಿದೆ.

ಆತನ ವಿರುದ್ದ ಪ್ರಕರಣ ದಾಖಲಾಗ್ತಿದ್ದಂತೆ ಉಮೇಶ್ ನಾಪತ್ತೆಯಾಗಿದ್ಧಾನೆ.

,

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *