ಅಪರಾಧ

ಧಾರವಾಡದ ಅಪ್ರಾಪ್ತಳ ಮೇಲೆ ಐವರು ಸಾಮೂಹಿಕ ಅತ್ಯಾಚಾರ……‌!

ಧಾರವಾಡ prajakiran.com : ಅಪ್ರಾಪ್ತಳ ಮೇಲೆ ಐವರು ಅಪ್ರಾಪ್ತ ದುರುಳರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಪ್ರಕರಣ ಧಾರವಾಡದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಧಾರವಾಡ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ
ಬಡಾವಣೆಯ ಸಂತ್ರಸ್ತ್ರಳ ಮೇಲೆ ಅದೇ ಬಡಾವಣೆಯ ಐವರು ಯುವಕರು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯಾದ ಅವಳನ್ನು ನಗರದ ಹೊರವಲಯಕ್ಕೆ ಒತ್ತಾಯದಿಂದ ಕರೆದುಕೊಂಡು ಹೋಗಿದ್ದ ಅಪ್ರಾಪ್ತ ಯುವಕರು, ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ತಿಳಿದು ಬಂದಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಧಾರವಾಡ ಶಹರ ಠಾಣೆಯ ಪೊಲೀಸರು ತನಿಖೆ ಕೈಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *