ನಾಸಿಕ್ prajakiran.com : ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಇಗತ್ಪುರಿ ನಗರದ ಎರಡು ವಿಲ್ಲಾಗಳಲ್ಲಿ ಭಾನುವಾರ ಬೆಳಿಗ್ಗೆ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಬಿಗ್ಬಾಸ್ ಮಾಜಿ ಸ್ಪರ್ಧಿ ಸಿಕ್ಕಿಬಿದ್ದಿದ್ದಾರೆ.
ಟಿವಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಮಾಜಿ ಸ್ಪರ್ಧಿ ಸೇರಿದಂತೆ, 12 ಮಂದಿ ಮಹಿಳೆಯರನ್ನು ಹಾಗೂ ಹತ್ತು ಮಂದಿ ಪುರುಷರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ರೇವ್ ಪಾರ್ಟಿ ನಡೆಯುತ್ತಿದ್ದ ವಿಲ್ಲಾದ ಮೇಲೆ ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ಡ್ರಗ್ಸ್ ಮತ್ತು ಹುಕ್ಕಾಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು
ನಾಸಿಕ್ ರೂರಲ್ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಪಾಟೀಲ್ ತಿಳಿಸಿದ್ದಾರೆ.
ನಾಸಿಕ್ ನ ಪ್ರತಿಷ್ಠಿತ ಸ್ಕೈ ತಾಜ್ ಮತ್ತು ಸ್ಕೈ ಲಾಗೂನ್ ವಿಲ್ಲಾದಲ್ಲಿ ಈ ರೇವ್ ಪಾರ್ಟಿ ನಡೆಯುತ್ತಿದ್ದು, ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ.