ಬೆಂಗಳೂರು prajakiran.com : ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರ್ ಅವರಿಗೂ ಕರೋನಾ ಪಾಸಿಟಿವ್ ದೃಢಪಟ್ಟಿದೆ.
ಭಾನುವಾರ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದ ಅವರಿಗೆ ಸೋಂಕು ಇರುವುದು ವರದಿಯಲ್ಲಿ
ದೃಢಪಟ್ಟಿದೆ.
ಎಸ್ಪಿ ಅವರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ
ಕಚೇರಿ ಸಿಬ್ಬಂದಿ ಐಸೋಲೇಶನ್ ಗೆ ಒಳಗಾಗಿದ್ದಾರೆ.
ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಜಾಗೃತೆ ವಹಿಸಿ, ಸಾಮಾಜಿಕ ಅಂತರ ಕಾಪಾಡಿ, ಮಾಸ್ಕ್ ಧರಿಸಿ, ಅನಗತ್ಯವಾಗಿ ಹೊರಗಡೆ ಸಂಚರಿಸಬೇಡಿ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ
ರವಿ ಡಿ. ಚನ್ನಣ್ಣನವರ್ ಸಾರ್ವಜನಿಕರಿಗೆ
ಮನವಿ ಮಾಡಿದ್ದಾರೆ