‘ಮುಗಿಲ್ ಪೇಟೆ’ ಚಿತ್ರದಲ್ಲಿ ಕೆಲಸ ಮಾಡಿದವರ ಖಾತೆಗೆ 5000 ರೂ, ಹಾಕಿದ ಮನೋರಂಜನ್
ಬೆಂಗಳೂರು prajakiran.com : ತಮ್ಮ ನಟನೆಯ “ಮುಗಿಲ್ ಪೇಟೆ’ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರ ಖಾತೆಗೂ 5000 ಹಣವನ್ನು ಹಾಕುವ ಮೂಲಕ ಸಹವರ್ತಿಗಳಿಗೆ ಆರ್ಥಿಕ ಸಹಾಯ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಮನೋರಂಜನ್, ಮನೆಯಲ್ಲಿದ್ದರೆ ಸುರಕ್ಷಿತವಾಗಿರುತ್ತೇವೆಂದು ನಾವೆಲ್ಲ ಭಾವಿಸಿರುತ್ತೇವೆ.
ಆದರೆ ನನ್ನ ಅನೇಕ ಕಲಾವಿದ ಸ್ನೇಹಿತರು ಈ ಕೊರೊನಾ ಸಂದರ್ಭದಲ್ಲಿ ಜೀವನ ನಡೆಸುವುದಕ್ಕೆ ಕಷ್ಟ ಪಡುತ್ತಿದ್ದಾರೆ.
ಈ ಸಮಯದಲ್ಲಿ ನನ್ನ ಸ್ನೇಹಿತರ ನೆರವಿಗೆ ನಿಲ್ಲಬೇಕಾಗಿರೋದು ನನ್ನ ಕರ್ತವ್ಯ. ಸದ್ಯ ಮುಗಿಲ್ ಪೇಟೆ ಸಿನಿಮಾದಲ್ಲಿ ನಾನು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದೇನೆ.
ನನ್ನ ಈ ಒಂದು ವರ್ಷದ ಪ್ರಾಜೆಕ್ಟ್ ನಲ್ಲಿ ನೂರಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿದ್ದಾರೆ.
ಹೀಗಾಗಿ ಮುಗಿಲ್ ಪೇಟೆ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರಿಗೂ ನನ್ನ ಕಡೆಯಿಂದ 5000 ಹಣವನ್ನು ಅವರ ಖಾತೆಗೆ ಹಾಕುವ ನಿರ್ಣಯ ಮಾಡಿದ್ದೇನೆ ಎಂದರು.