ಅಂತಾರಾಷ್ಟ್ರೀಯ

ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಪತ್ನಿ ಮಧುಲಿಕಾ ಸೇರಿ 11 ಸಿಬ್ಬಂದಿ ಸಾವು

ನವದೆಹಲಿ prajakiran.com : ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ತಮಿಳುನಾಡಿನ ಕೂನೂರು ಬಳಿ ನಡೆದ ಹೆಲಿಕಾಪ್ಟರ್ ಪತನದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ವೆಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ MI-17V5 ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರು ಬಳಿ ದಟ್ಟ ಅರಣ್ಯದಲ್ಲಿ ಬುಧವಾರ ಪತನಗೊಂಡಿತ್ತು.

ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ ಎಂದು ಭಾರತೀಯ ವಾಯುಸೇನೆ ಪಡೆ (ಐ ಎ ಎಫ್) ಸ್ಪಷ್ಟಪಡಿಸಿದೆ.

ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಿಪಿನ್ ರಾವತ್ ಅವರನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳಿದ್ದಾರೆ.

ಬಿಪಿನ್ ರಾವತ್ ಭಾರತೀಯ ಸೇನೆಯ ಮೊದಲ ಸಿಡಿಎಸ್ ಆಗಿ ನೇಮಕಗೊಂಡಿದ್ದರು.

ಹೆಲಿಕಾಪ್ಟರ್ ದುರಂತದಲ್ಲಿ ಪೈಲಟ್ ವರುಣ್ ಸಿಂಗ್ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ವರುಣ್ ಸಿಂಗ್ ಶೇ.80ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಕೇಂದ್ರ ಸಚಿವ ಸಂಪುಟದ ತುರ್ತು ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಹಾಗೂ ಗೃಹ ಸಚಿವ ಅಮಿತ್ ಶಾ, ಅಜಿತ್ ದೋವಲ್ ಅವರಿಂದ ಘಟನೆ ಕುರಿತು ಸಂಪೂರ್ಣ ಮಾಹಿತಿ ಪಡೆದರು.

ರಾವತ್ ಅವರ ಸಾವಿನಿಂದಾಗಿ ಭಾರತೀಯ ಸೇನೆಯ ರಕ್ಷಣಾ ಕವಚವೇ ಕಳಚಿದಂತಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

ಅಲ್ಲದೆ, ಈ ಕುರಿತು ತನಿಖೆ ನಡೆಸಲು ನಿರ್ಧಾರವನ್ನು ಕೈಗೊಂಡಿತು.

ನಾಳೆ ನವದೆಹಲಿಗೆ 13 ಜನರ ಪ್ರಾರ್ಥಿವವನ್ನು ಕರೆ ತಂದು ಅಂತಿಮ ವಿಧಿವಿಧಾನ‌ನೆರವೇರಿಸಲು ನಿರ್ಧರಿಸಲಾಯಿತು.

ಜನರಲ್ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ದೇಶದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಜನರಲ್ ರಾವತ್, ಅವರ ಪತ್ನಿ ಹಾಗೂ ಇತರ ಸೇನಾ ಸಿಬ್ಬಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದು ಅತ್ಯಂತ ಆಘಾತಕಾರಿ ಹಾಗೂ ದುರದೃಷ್ಟಕರ.

ಭಗವಂತನು ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ಈ ಆಘಾತವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *