ರಾಜ್ಯ

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಗುಣಮುಖ

ಬೆಂಗಳೂರು prajakiran.com : 104 ವರ್ಷದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೊರೆಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.

ಮೇ.6 ರಂದು ದೊರೆಸ್ವಾಮಿಯವರಿಗೆ ಕೋವಿಡ್ ದೃಢಪಟ್ಟಿದ್ದು, ಜ್ವರ, ನೆಗಡಿ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು.

ತಜ್ಞರ ಚಿಕಿತ್ಸೆಯಿಂದ ದೊರೆಸ್ವಾಮಿಯವರು 7 ದಿನಗಳಲ್ಲಿ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *