ರಾಜ್ಯ

ಪಿಎಸ್ಐ 545 ಹುದ್ದೆಗಳಿಗೆ ಮರುಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ

ಬೆಂಗಳೂರು ಪ್ರಜಾಕಿರಣ.ಕಾಮ್ : ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದ್ದ ಪಿಎಸ್ಐ 545 ಹುದ್ದೆಗಳಿಗೆ ಮರುಪರೀಕ್ಷೆ ನಡೆಸುವಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಹೈಕೋರ್ಟ್ ದ್ವಿಸದಸ್ಯ ಪೀಠದ ನ್ಯಾಯಮೂರ್ತಿ ಗಳಾದ ಪಿ.ಎಸ್.ದಿನೇಶ್ ಕುಮಾರ್ ಹಾಗೂ ಟಿ.ಜಿ.ಶಿವಶಂಕರೇಗೌಡ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.

ಅದೂ ಅಲ್ಲದೆ, ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಆರೋಪದ ಹಿನ್ನೆಲೆಯಲ್ಲಿ ನೇಮಕಾತಿ ಸಂಬಂಧ ಈ ಹಿಂದೆ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ನೂತನವಾಗಿ ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿತ್ತು.

ಅದನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ನಮಗೆ ಇದರಿಂದಾಗಿ ತೀವ್ರ ಅನ್ಯಾಯವಾಗಲಿದೆ ಎಂದು ಹೈಕೋರ್ಟ್ ಮೊರೆ ಹೋಗಿದ್ದರು

ಇದೀಗ ಹೈಕೋರ್ಟ್​ ಮರುಪರೀಕ್ಷೆ ಪ್ರಶ್ನಿಸಿದ್ದ ಅರ್ಜಿಯನ್ನು ​​ವಜಾಗೊಳಿಸಿದೆ.

ಇದು ರಾಜ್ಯದ 56 ಸಾವಿರ ಪಿಎಸ್ ಐ ಆಕಾಂಕ್ಷಿಗಳ ಮುಖದಲ್ಲಿ ಮಂದಹಾಸ ಮೂಡಿಸಿದರೆ, 545 ಪಿ ಎಸ್ ಐ ಆಕಾಂಕ್ಷಿಗಳಿಗೆ ತೀವ್ರ ನಿರಾಸೆ ಮೂಡಿಸಿದೆ. ಅವರು ಇದೀಗ ಸುಪ್ರೀಂ ಕೋರ್ಟ್ ‌ಮೆಟ್ಟಲು ಹತ್ತಲಿದ್ದಾರೆಯೇ ಕಾದು ನೋಡಬೇಕು.

ಆ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗಿ ಅಂದು ನಿರಂತರವಾಗಿ ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ಹಾಗೂ ಉಪಾಧ್ಯಕ್ಷ ನಾಗರಾಜ ಕಿರಣಗಿ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ, ವಿದ್ಯಾರ್ಥಿ ಮುಖಂಡ ಸುರೇಶ ಕೋರಿ, ರವಿಶಂಕರ್ ಮಾಲಿ ಪಾಟೀಲ, ವಿನೋದ ಶೆಟ್ಟಿ, ಅರುಣ್, ಹಾಗೂ ಸಾವಿರಾರು ಅಭ್ಯರ್ಥಿಗಳು ಹೋರಾಟ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು

ಅಕ್ರಮದ ವಿವರ :
545 ಪಿಎಸ್‌ಐಗಳ ನೇಮಕಾತಿಗಾಗಿ 2021ರ ಅಕ್ಟೋಬರ್ 3 ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಆಗ ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಕಲಬುರಗಿ, ಬೆಂಗಳೂರು, ತುಮಕೂರು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಬ್ಲೂ ಟೂತ್ ಬಳಕೆ, ಓ ಎಂ ಆರ್ ಶೀಟ್ ತಿದ್ದಿದ ಆರೋಪ ಸೇರಿದಂತೆ ಹಲವು ಗಂಭೀರ ಪ್ರಮಾಣದ ಆರೋಪದ ಮೇಲೆ ಒಟ್ಟು 110 ಜನರನ್ನು ಸಿಐಡಿ ಬಂಧಿಸಿತ್ತು.

ಅಲ್ಲದೆ, ಈ 52 ಅಭ್ಯರ್ಥಿಗಳು ಯಾವುದೇ ಪೊಲೀಸ್ ನೇಮಕಾತಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿತ್ತು.

ಜೊತೆಗೆ ಎಡಿಜಿಪಿ ಶ್ರೇಣಿಯ ಹಿರಿಯ ಪೊಲೀಸ್ ಅಧಿಕಾರಿಯಾಗಿದ್ದ ಅಮೃತ್ ಪಾಲ್ ಅವರನ್ನು ಅಕ್ರಮ ನೇಮಕಾತಿಗೆ ಸಹಕರಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *