ಬೆಂಗಳೂರು prajakiran.com : ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಆ ಪರೀಕ್ಷೆ ರದ್ದುಗೊಳಿಸಿ, ಅಭ್ಯರ್ಥಿಗಳಿಗೆ ಹೊಸದಾಗಿ ಮರುಪರೀಕ್ಷೆ ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಬೆಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಒಂದಕ್ಕಿಂತ ಹೆಚ್ಚು ಸೆಂಟರ್ನಲ್ಲಿ ಅವ್ಯವಹಾರ ಮನದಟ್ಟಾಗಿದೆ ಎಂದರು.
ಹೀಗಾಗಿ ಸರ್ಕಾರ ಇಡೀ ಪರೀಕ್ಷೆಯನ್ನು ರದ್ದುಪಡಿಸಿದೆ. 54,289 ಅಭ್ಯರ್ಥಿಗಳು ಪರೀಕ್ಷೆಗೆ ಕುಳಿತಿದ್ದರು.
ಅವರಿಗೆ ಇನ್ನೊಮ್ಮೆ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.
ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ಅವಕಾಶ ನೀಡಲಾಗುತ್ತದೆ ಎಂದ ಆರಗ ಜ್ಞಾನೇಂದ್ರ, ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.