ಅಂತಾರಾಷ್ಟ್ರೀಯ

ಜೈಲು ಸೇರಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣ

ಜೈಲು ಸೇರಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣ

ಬೆಂಗಳೂರು ಪ್ರಜಾಕಿರಣ.ಕಾಮ್ : ಹಾಸನ ವಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಬೆಳಕಿಗೆ ಬರುತ್ತಿದ್ದಂತೆ ಸಂತ್ರಸ್ತೆ ಕಿಡ್ನಾಪ್ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಹಾಲಿ ಶಾಸಕ ಹೆಚ್.ಡಿ. ರೇವಣ್ಣ ಅವರನ್ನು ಎಸ್ ಐ ಟಿ ನಾಲ್ಕು ದಿನಗಳ ಕಾಲ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು.

ನಿನ್ನೆ ಸಂಜೆಗೆ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರು ಪಡಿಸಿದರು.

ಅವರನ್ನು ಎಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು.

ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು.

ಜೈಲು ಸೇರಿದ ಹೆಚ್. ಡಿ. ರೇವಣ್ಣ ಅವರಿಗೆ ವಿಚಾರಣಾಧೀನ ಖೈದಿ ಸಂಖ್ಯೆ 4567 ನೀಡಲಾಗಿದೆ.

ರೇವಣ್ಣ ತಡರಾತ್ರಿ ಒಂದು ಗಂಟೆಯವರೆಗೆ ನಿದ್ದೆ ಮಾಡದೆ ಚಿಂತಾಕ್ರಾಂತರಾಗಿದ್ದರು ಆದರೆ ಬೆಳಗ್ಗೆ ಐದು ಗಂಟೆಗೆ ಎದ್ದ ಅವರು ಜೈಲಿನಲ್ಲಿ ಕಾಫಿ ತಿಂಡಿ ಸೇವಿಸಿದರು.

ಇಂದು ಮತ್ತೆ ಅವರ ಜಾಮೀನಿನ ಅರ್ಜಿ ವಿಚಾರಣೆಗೆ ಬರಲಿದೆ.
ಅವರ ಪರ ಹಿರಿಯ ವಕೀಲ ಸಿ.ವಿ. ನಾಗೇಶ ವಾದ ಮಂಡಿಸಲಿದ್ದಾರೆ.

ಈ ನಡುವೆ ಎಸ್ ಐ ಟಿ ರಚನೆಯಾಗಿ ಹದಿನಾಲ್ಕು ದಿನಗಳು ಕಳೆದರೂ ಸಂಸದ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ.

ಅವರ ಚಲನವಲನಗಳನ್ನು ಗಮನಿಸಲು ಎಸ್ ಐ ಟಿ ಸಿಬಿಐ ಮೂಲಕ 192 ದೇಶಗಳ ವಿಮಾನ ನಿಲ್ದಾಣಗಳಲ್ಲಿ ಬ್ಲೂ ಕಾರ್ನರ್ ನೋಟಿಸ್ ಜಾರಿಮಾಡಿರುವುದನ್ನು ಇಲ್ಲಿ ಸ್ಮರಿಸಬಹುದು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *