ರಾಜ್ಯ

ಬೆಂಗಳೂರಿನ ಹಲವಾರು ರೌಡಿಗಳ ಮನೆಗಳ ಮೇಲೆ ಪೊಲೀಸ್ ದಾಳಿ

ಬೆಂಗಳೂರು prajakiran.com : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳಿಗೆ ಬಿಗ್ ಶಾಕ್ ನೀಡಿದ ಪೊಲೀಸರು ನಗರದ ವಿವಿಧ ಭಾಗಗಳಲ್ಲಿರುವ ರೌಡಿಗಳ ನಿವಾಸದ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

ನಗರದ 8 ವಲಯಗಳ ಪೊಲೀಸರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ 1 ಸಾವಿರಕ್ಕೂ ಅಧಿಕ ರೌಡಿಗಳ ಮನೆ ಮೇಲೆ ಏಕಾಏಕಿ ದಾಳಿ ಮಾಡಿದ್ದಾರೆ. ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

ಲಾಕ್ ಡೌನ್ ತೆರವಿನ ನಂತರ ರೌಡಿಸಂ ಚಟುವಟಿಕೆ ಹೆಚ್ಚಾಗಿರುವ ಬಗ್ಗೆ ಅನೇಕ ದೂರುಗಳು ಬಂದಿದ್ದವು.

ಡೌನ್ ಹಿನ್ನೆಲೆಯಲ್ಲಿ ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿಗಳ ಪೆರೇಡ್ ನಡೆಸಿರಲಿಲ್ಲ. ಹೀಗಾಗಿ ನಗರದ 8 ವಲಯಗಳ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ, ರೌಡಿಗಳನ್ನು ವಶಕ್ಕೆ ಪಡೆದು ಡ್ರಿಲ್ ನಡೆದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *