ಆಧ್ಯಾತ್ಮ

ಧಾರವಾಡ : ಕೇವಲ ೫ ಗಂಟೆಗಳಲ್ಲಿ ಮರಳಿನಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಬೃಹತ್ ಕಲಾಕೃತಿ

ಕೇವಲ ೫ ಗಂಟೆಗಳಲ್ಲಿ ಮರಳಿನಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಬೃಹತ್ ಕಲಾಕೃತಿ
* ಜನಜಾಗೃತಿ ಸಂಘದಿAದ ಆಯೋಜನೆ * ಕಲಾವಿದ ಮಂಜುನಾಥ ಹಿರೇಮಠ ಅವರ ಕೈ ಚಳಕ
ಧಾರವಾಡ : ಸ್ವಾಮಿ ವಿವೇಕಾನಂದರ ೧೬೦ನೇ ಜಯಂತಿ ಪ್ರಯುಕ್ತ ಜನ ಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ನೇತೃತ್ವದಲ್ಲಿ ಆಯೋಜಿಸಿದ್ದ ವಿಶಿಷ್ಟ ಕಾರ್ಯಕ್ರಮಕ್ಕೆ ಬೆಳಗ್ಗೆ ಕಲಾವಿದ ಮಂಜುನಾಥ ಹಿರೇಮಠ, ಹಾಗೂ ಅವರ ಮಕ್ಕಳಾದ ಕಾಂತೇಶ ಹಾಗೂ ವಿನಾಯಕ ಕೈ ಚಳಕದಲ್ಲಿ ೫ ಗಂಟೆಗಳಲ್ಲಿ ಸ್ವಾಮಿ ವಿವೇಕಾನಂದರ ಬೃಹತ್ ಮರಳಿನ ಕಲಾಕೃತಿ ಅರಳಿತು.
ಆನಂತರ ಜನ ಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವg ಹಾಗೂ ಅವರ ಧರ್ಮಪತ್ನಿ  ಸುಮಂಗಲಾ ಕೊರವರ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಧನ್ಯತಾ ಭಾವ ಮೆರೆದರು.
ಆ ನಂತರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿಯವರು ಸ್ವಾಮಿ ವಿವೇಕಾನಂದರು ಹಾಗೂ ನೇತಾಜಿ ಸುಭಾಸಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ  ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನಾಗರಾಜ ಕಿರಣಗಿ, ಬಸವಣೆಪ್ಪ ಕಮತಿ, ಆನಂದ ಪಾಟೀಲ, ಶಿವಾಜಿ ಪವಾರ, ಮಹಾಂತೇಶ ಪಾಟೀಲ ಸೇರಿದಂತೆ ಬಡಾವಣೆಯ ಗುರು ಹಿರಿಯರು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *