ರಾಜ್ಯ

ವಿಧಾನಸೌಧ, ಸಿಎಂ ಗೃಹ ಕಚೇರಿ ಕೃಷ್ಣಾಗೂ ಸ್ಯಾನಿಟೇಶನ್ : ಆರೋಗ್ಯ ಸಚಿವ ಶ್ರೀರಾಮುಲು ಸರಕಾರಿ ಮನೆ ಸೀಲ್ ಡೌನ್

ಬೆಂಗಳೂರು prajakiran.com :  ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ಮನೆಗೆ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಮಹಿಳಾ ಪೊಲೀಸ್ ಕಾನ್ಸಟೇಬಲ್ ಪತಿಗೆ ಕರೋನಾ ಬಂದಿರುವುದು ದೃಢಪಟ್ಟಿದೆ.

ಹೀಗಾಗಿ ಬೆಂಗಳೂರಿನ ಸಪ್ತ ಸಚಿವರ ಸರಕಾರಿ ಗೃಹ ನಿವಾಸದಲ್ಲಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ಅಧಿಕೃತ ಸರಕಾರಿ ನಿವಾಸವನ್ನು ಮುಂಜಾಗ್ರತ ಕ್ರಮವಾಗಿ ಸೀಲ್ ಡೌನ್ ಮಾಡಲಾಗಿದೆ.

ಈ ಮನೆಗೆ ಒಂದು ವಾರಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಅಲ್ಲದೆ, ಕರ್ತವ್ಯ ನಿರ್ವಹಿಸುವ ಗೃಹ ಕಚೇರಿ ಸಿಬ್ಬಂದಿಯನ್ನು ಕೂಡ ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ.



ಇದರೊಂದಿಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಕೂಡ ಸೆಲ್ಫ್ ಕ್ವಾರಂಟಿನ್ ಆಗಲು   ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಸಿಎಂ ಬಿ.ಎಸ್. ಯಡಿಯೂರಪ್ಪಅವರ ಗೃಹ ಕಚೇರಿ ಕೃಷ್ಣಾಗೂ ಸ್ಯಾನಿಟೇಶನ್ ಮಾಡಲಾಗಿದೆ.

ವಿಧಾನಸೌಧದಲ್ಲಿರುವ ಸಿಬ್ಬಂದಿಯ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದರೆ ಅವರಿಗೆ ಫೀವರ್ ಕ್ಲಿನಿಕ್ ಗೆ ಶಿಫ್ಟ ಆಗಲು ಸೂಚಿಸಲಾಗಿದೆ.

ಈಗಾಗಲೇ ಬೆಂಗಳೂರಿನ ವಿಧಾನಸೌಧ  ಸ್ಯಾನಿಟೇಶನ್ ಮಾಡಿಸಲಾಗಿದ್ದು,  ಸಿಬ್ಬಂದಿಗೆ ಕೋವಿಡ್ ತಪಾಸಣೆ ಮಾಡಲಾಗಿದ್ದು, ಥರ್ಮಲ್ ಸ್ಕ್ರೀನಿಂಗ್ ನಡೆಸಿ, ಅವರ ಆಕ್ಸಿಜನ್ ಸ್ಯಾಚುರೇಶನ್ ಮಾಡಲಾಗಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *