ರಾಜ್ಯ

ಸವದತ್ತಿ ಯಲ್ಲಮ್ಮ ದೇವಸ್ಥಾನ : ಜೂನ್ 15 ರವರೆಗೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ

ಬೆಳಗಾವಿ : ಮಹಾರಾಷ್ಟ್ರ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಕರೋನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವುದರಿಂದ ಭಕ್ತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜೂನ್ 15 ರವರೆಗೆ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಯಲ್ಲಮ್ಮದೇವಿ ದೇವಸ್ಥಾನಕ್ಕೆ ಎಲ್ಲ ರಾಜ್ಯಗಳಿಂದ ಭಕ್ತರು ಆಗಮಿಸುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸದ್ಯಕ್ಕೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡದಂತೆ ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಅವರು ನಿರ್ದೇಶನ ನೀಡಿರುತ್ತಾರೆ. ಹೀಗಾಗಿ ಭಕ್ತರು ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದ್ದಾರೆ.

ಆದರೆ ದೇವಸ್ಥಾನದಲ್ಲಿ ಎಂದಿನಂತೆ ಧಾರ್ಮಿಕ ವಿಧಿವಿಧಾನಗಳು ಮತ್ತು ಸರ್ಕಾರದ ಮಾರ್ಗಸೂಚಿ ಪ್ರಕಾರ ಪೂಜೆ ನಡೆಸಲಾಗುತ್ತಿದೆ ಎಂದು ಕೋಟಾರಗಸ್ತಿ ಸ್ಪಷ್ಟಪಡಿಸಿದ್ದಾರೆ.

ಆದರೆ ದೇವಸ್ಥಾನದಲ್ಲಿ ಎಂದಿನಂತೆ ಧಾರ್ಮಿಕ ವಿಧಿವಿಧಾನಗಳು ಮತ್ತು ಸರ್ಕಾರದ ಮಾರ್ಗಸೂಚಿ ಪ್ರಕಾರ ಪೂಜೆ ನಡೆಸಲಾಗುತ್ತಿದೆ ಎಂದು ಕೋಟಾರಗಸ್ತಿ ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಸರಕಾರ ಜೂನ್ ಒಂದರಿಂದ ರಾಜ್ಯದಲ್ಲಿರುವ ಎಲ್ಲಾ ಮುಜರಾಯಿ ದೇವಸ್ಥಾನಗಳನ್ನು,  ಮಸೀದಿ ಹಾಗೂ ಚರ್ಚ್ಗಳ ಆರಂಭಕ್ಕೆ ಸಮ್ಮತಿ ನೀಡಿದೆ.

ಆದರೆ ಹಲವು ಷರತ್ತು ವಿಧಿಸಿ, ಅಗತ್ಯ ಕ್ರಮಕ್ಕೆ ಸೂಚಿಸುವ ಸಾಧ್ಯತೆಗಳಿದ್ದು, ಈ ಬಗ್ಗೆ ಕೇಂದ್ರ ಸರಕಾರ ಮೇ 31ರ ನಂತರವೂ ಲಾಕ್ ಡೌನ್ ವಿಸ್ತರಣೆ ಮಾಡುತ್ತಾ ಇಲ್ಲವೇ ಕೆಲವು ಮಾರ್ಪಾಡು ಮಾಡಿ ಹೊಸ ಮಾರ್ಗಸೂಚಿ ಪ್ರಕಟಿಸುತ್ತಾ ಎಂಬುದಕ್ಕೆ ಕಾಯುತ್ತಿದೆ.

ಹೀಗಾಗಿ ಉತ್ತರ ಕರ್ನಾಟಕ ಭಾಗದ ಲಕ್ಷಾಂತರ ಭಕ್ತರ ಆರಾದ್ಯ ದೈವವಾಗಿರುವ ಸವದತ್ತಿ ಯಲ್ಲಮ್ಮ ದರ್ಶನ ಭಾಗ ಸದ್ಯಕ್ಕೆ ಹದಿನೈದು ದಿನ ಮುಂದಕ್ಕೆ ಹೋದಂತಾಗಿದೆ ಎಂದರೆ ತಪ್ಪಾಗಲಾರದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *