ರಾಜ್ಯ

ಧಾರವಾಡ, ಹುಬ್ಬಳ್ಳಿ ತಾಲೂಕಿನಾದ್ಯಂತ ಜ.13ರಿಂದ ಶಾಲೆ, ಅಂಗನವಾಡಿ ಕೇಂದ್ರ ಬಂದ್

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕರೋನಾ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ ಶಾಲೆ ಹಾಗೂ ಅಂಗನವಾಡಿ ಕೇಂದ್ರ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದರು.

ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಒಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ನಾಳೆ ಜ.13 ರಿಂದ ಮುಂದಿನ ಆದೇಶದ ವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ಇದರಿಂದಾಗಿ ಪಾಲಕರು ಹಾಗೂ ವಿಶೇಷವಾಗಿ ಮಕ್ಕಳು ಹಾಗೂ ಶಿಕ್ಷಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಅಲ್ಲದೆ, ಈ ಅವಧಿಯಲ್ಲಿ ಆನ್ ಲೈನ್ ಮುಖಾಂತರ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಅವರು ತಿಳಿಸುದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *