education minister sureshkumar
ರಾಜ್ಯ

ಜೂನ್ 15ರಿಂದ 2021-22 ನೇ ಸಾಲಿನ ಶಾಲೆಗಳು ಆರಂಭ

ಬೆಂಗಳೂರು Prajakiran.com : ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸ್ತುತ ಪರಿಸ್ಥಿತಿ ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಜೂನ್ 14ರವರೆಗೆ ರಜೆ ನೀಡಲಾಗಿದ್ದು, ಜೂನ್ 15ರಿಂದ 2021-22 ನೇ ಸಾಲಿನ ಶಾಲೆಗಳು ಆರಂಭವಾಗಲಿದೆ. ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮೇ 31ರವರೆಗೆ ರಜೆ ನೀಡಲಾಗಿದೆ.

ಪ್ರೌಢಶಾಲಾ‌ ಶಿಕ್ಷಕರು ರಜೆ ಅವಧಿಯಲ್ಲಿ‌ ಎಸ್.ಎಸ್.ಎಲ್.ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು.

ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು ಎಂದು ಇಲಾಖೆಯ ಸುತ್ತೋಲೆಯಲ್ಲಿ ವಿವರಿಸಲಾಗಿದೆ.

ಜೂನ್ 1ರಿಂದ 14 ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪುನರ್ಮನನ ತರಗತಿಗಳು ನಡೆಯಲಿವೆ.

ಜೂನ್ 15ರಿಂದ 8-10 ನೇ ತರಗತಿಗಳು‌ ಪ್ರಾರಂಭವಾಗಲಿವೆ ಎಂದು ಹೇಳಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *