ರಾಜ್ಯ

ರಾಜ್ಯಾದ್ಯಂತ ಸೋಮವಾರದಿಂದ ಶಾಲಾ-ಕಾಲೇಜುಗಳ ತರಗತಿಗಳು ಆರಂಭ

ಜಿಲ್ಲೆಗಳ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕ- ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ

ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸೂಚನೆ

ಬೆಂಗಳೂರು prajakiran.com ಆಗಸ್ಟ್ 23 : ಸೋಮವಾರದಿಂದ 9, 10 ಮತ್ತು ಪಿ.ಯು.ಸಿ ತರಗತಿಗಳು ಪ್ರಾರಂಭವಾಗುತ್ತಿವೆ.

ಈ ಹಿನ್ನೆಲೆಯಲ್ಲಿ ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ. ಶಿಕ್ಷಕರನ್ನು ಪ್ರೋತ್ಸಾಹಿಸಿ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ. ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು

ಅವರು ಶಾಲೆ ಆರಂಭದ ಹಿನ್ನೆಲೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳ ಸಭೆ ಬಳಿಕ ಮಾತನಾಡಿದರು

ಈ ಸಂಬಂಧ ಅವರು ಟ್ವೀಟ್ ಮಾಡಿದ್ದು, ಶಾಲೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ‌ ಎಂದು ತಿಳಿಸಿದ್ದಾರೆ.‌

ಸಚಿವರು ತಮ್ಮ‌ ಜಿಲ್ಲೆಯ ಶಾಲೆಗಳಿಗೆ ಭೇಟಿ ನೀಡಬೇಕು. ಶಿಕ್ಷಕರನ್ನು ಪ್ರೋತ್ಸಾಹಿಸಿ, ಶಾಲೆಗಳಲ್ಲಿ ಕೈಗೊಂಡ ಮುಂಜಾಗೃತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಹೇಳಿದರು

ಪಾಲಕ-ಪೋಷಕರಲ್ಲಿ ವಿಶ್ವಾಸ ಮೂಡಿಸುವಂತೆ ಸಚಿವರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.

ಮಕ್ಕಳು ಮತ್ತು ಪಾಲಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು.

ಯಾವುದೇ ಆತಂಕ ಇಲ್ಲದೇ ಸರ್ಕಾರದ ಜತೆ ಸಹಕರಿಸುವಂತೆ ಪಾಲಕರು ಮತ್ತು ಪೋಷಕರಿಗೆ ಮುಖ್ಯಮಂತ್ರಿ ‌ಬೊಮ್ಮಾಯಿ ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *