ಅಂತಾರಾಷ್ಟ್ರೀಯ

ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಮತ್ತೆ 77 ಹೊಸ ಕೋವಿಡ್ ಪ್ರಕರಣಗಳು ದೃಢ

ಧಾರವಾಡ prajakiran. com ನ.27: ಧಾರವಾಡದ ಎಸ್ ಡಿ ಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ಇಂದು ಮತ್ತೆ 77 ಜನರಲ್ಲಿ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದ್ದಾರೆ.

ಕಳೆದ ಎರಡು ದಿನಗಳಲ್ಲಿ 204 ಜನರಲ್ಲಿ ಹಾಗೂ ಇಂದು 77 ಪ್ರಕರಣಗಳು ಸೇರಿ ಒಟ್ಟು 281 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಎಲ್ಲರಿಗೂ ಚಿಕಿತ್ಸೆ,ಔಷಧೋಪಚಾರ ನಡೆಯುತ್ತಿದೆ.ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ.

ಇನ್ನೂ 1822 ಜನರ ತಪಾಸಣಾ ವರದಿಗಳು ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಎಲ್ಲರ ಆರೋಗ್ಯ ಸ್ಥಿರ : 

ವರದಿಯಾಗಿರುವ 281 ಪ್ರಕರಣಗಳಲ್ಲಿ , ಕೇವಲ 6 ಜನರಲ್ಲಿ ಮಾತ್ರ ರೋಗದ ಸಾಮಾನ್ಯ ಲಕ್ಷಣಗಳಿವೆ(Mild Symptomatic) ಖಾಯಿಲೆ ತೀವ್ರತರವಾಗಿಲ್ಲ. ಉಳಿದ 275 ಜನರಲ್ಲಿ ರೋಗದ ಲಕ್ಷಣಗಳು ಇಲ್ಲ (Asymptomatic) ಎಂದು ವಿವರಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *