ಜಿಲ್ಲೆ

ಧಾರವಾಡ ಎಸ್ ಡಿ ಎಂ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ

ಧಾರವಾಡ prajakiran.com  : ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಪ್ರಯತ್ನಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ.

ಲಾಕ್ ಡೌನ್ ಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿಯಾದುದು, ಜಿಲ್ಲಾಡಳಿತಕ್ಕೆ ಉತ್ತಮ ಸಹಕಾರ ನೀಡುತ್ತಿರುವ ಎಸ್ ಡಿ ಎಂ ಆಸ್ಪತ್ರೆ ಉಳಿದ ಖಾಸಗಿ ಆಸ್ಪತ್ರೆಗಳಿಗೆ ಮಾದರಿಯಾಗಿದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದರು.

ಅವರು ಸತ್ತೂರಿನ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ  ಕೋವಿಡ್ ತಪಾಸಣೆ ವೈರಾಲಜಿ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದರು.

ಕೋವಿಡ್ ಸೋಂಕಿತರ ತ್ವರಿತ ಪತ್ತೆಗೆ ಮತ್ತೊಂದು ಪ್ರಯೋಗಾಲಯ ಪ್ರಾರಂಭವಾಗುತ್ತಿರುವುದು ನೆರವಾಗಲಿದೆ.

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಎಸ್ ಡಿ ಎಂ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಉತ್ತಮ ಸಹಕಾರ ನೀಡುತ್ತದೆ.  ಕೊರೊನಾ ವಾರಿಯರ್ ಗಳಾಗಿರುವ ವೈದ್ಯರು, ನರ್ಸ್ ಗಳ ಸೇವೆ ಅನನ್ಯವಾದುದು.

ಕೋವಿಡ್ ಬಗ್ಗೆ ಮಾಧ್ಯಮಗಳು ಭಯ ಸೃಷ್ಟಿಸದೇ, ಜಾಗೃತಿ ಮೂಡಿಸಬೇಕು. ಶೇ.೬೪ ರಷ್ಟು ಜನ ಗುಣಮುಖರಾಗಿ ಬಿಡುಗಡೆಯಾಗುತ್ತಿದ್ದಾರೆ.

ಕೋವಿಡ್ ತಡೆಗೆ ಪ್ರಧಾನ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ತ್ವರಿತವಾಗಿ ಕಾರ್ಯೋನ್ಮುಖರಾದ ಪರಿಣಾಮ ಇಂದು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತಿದೆ.

ಜನರ ಅಭಿಪ್ರಾಯ ಆಧರಿಸಿ ಜಿಲ್ಲೆಯಲ್ಲಿ ಹತ್ತು ದಿನಗಳ ಲಾಕ್ ಡೌನ್ ಜಾರಿಯಲ್ಲಿದೆ. ಪ್ರತಿಯೊಬ್ಬರೂ ಸ್ವಯಂ ನಿರ್ಬಂಧ ಹಾಕಿಕೊಂಡು ಕೊರೊನಾ ತಡೆಯಲು ಕೈಜೋಡಿಸಬೇಕು ಎಂದರು.

ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆ, ಕೇಂದ್ರ ಗಣಿ,ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಆನ್ ಲೈನ್ ಗೂಗಲ್ ಮೀಟ್ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

 ಎಸ್ ಡಿ ಎಂ ವಿಶ್ವವಿದ್ಯಾಲಯದ ಉಪಕುಲಪತಿ, ಕಾಲೇಜು ನಿರ್ದೇಶಕ ಡಾ.ನಿರಂಜನಕುಮಾರ, ಪ್ರಾಚಾರ್ಯೆ ಡಾ. ರತ್ನಮಾಲಾ ದೇಸಾಯಿ, ವೈದ್ಯಕೀಯ ಅಧೀಕ್ಷಕ ಡಾ.ಕಿರಣ ಹೆಗಡೆ, ಮೈಕ್ರೊಬಯಾಲಜಿ ವಿಭಾಗದ ಮುಖ್ಯಸ್ಥ ಡಾ.ಆರ್.ಡಿ.ಕುಲಕರ್ಣಿ, ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ ಕಲ್ಲಾಪುರ   ಇದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *