ಧಾರವಾಡ prajakiran.com : ಧಾರವಾಡದಲ್ಲಿರುವ ಮೆಡಿಕಲ್ ಕಾಲೇಜಿನ ಹಲವಾರು ವಿದ್ಯಾರ್ಥಿಗಳಿಗೆ ಕೊರೊನಾ ಹರಡಿರುವುದು ಖಚಿತಗೊಂಡಿದೆ.
ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊವಿಡ್ ಪಾಸಿಟಿವ್ ಕಂಡು ಬಂದಿದೆ ಎಂದು ಮೂಲಗಳು ತಿಳಿಸಿವೆ.
ಧಾರವಾಡದ ಸತ್ತೂರು ಬಡಾಣೆಯಲ್ಲಿರುವ
ಎಸ್.ಡಿ.ಎಂ ವೈದ್ಯಕೀಯ ಕಾಲೇಜು
ಇದಾಗಿದ್ದು,
ಆರಂಭದಲ್ಲಿ 4 ವಿದ್ಯಾರ್ಥಿಗಳಿಗೆ ಪಾಸಿಟಿವ್ ಕಂಎಉ ಬಂದಿತ್ತು.
ಈ ಹಿನ್ನೆಲೆಯಲ್ಲಿ 300 ವಿದ್ಯಾರ್ಥಿಗಳು ತಪಾಸಣೆಗೊಳಪಟ್ಟಿದ್ದರು.
ತಪಾಸಣೆ ವೇಳೆ 66 ವಿದ್ಯಾರ್ಥಿಗಳಿಗೆ ಸೋಂಕು ದೃಢಗೊಂಡಿದೆ.
ಮೆಡಿಕಲ್ ಕಾಲೇಜಿನ ಹಾಸ್ಟೆಲ್ನಲ್ಲಿ ಸೋಂಕಿತರಿಗೆ ಕ್ವಾರಂಟೈನ್ ಮಾಡಲಾಗಿದೆ.
ಇನ್ನೂ 200 ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಲು ನಿರ್ಧಾರ ಮಾಡಲಾಗಿದೆ.