ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಧಾರವಾಡ prajakiran.com : ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ  ರಾಮ ಮಂದಿರ ಶಿಲಾನ್ಯಾಸ ಜರುಗುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

 ಗ್ರಾಮೀಣ ಪ್ರದೇಶಗಳಲ್ಲಿ ಮತೀಯ ಸೌಹಾರ್ದತೆ, ಕಾನೂನು,ಸುವ್ಯವಸ್ಥೆ ಕಾಪಾಡಿಕೊಂಡು ಬರುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಇಂದು ಆಗಸ್ಟ್ 4 ಮಧ್ಯರಾತ್ರಿ 12 ಗಂಟೆಯಿಂದ ಅಗಸ್ಟ್  6 ಬೆಳಿಗ್ಗೆ 6 ಗಂಟೆಯವರೆಗೆ ಸಿ ಆರ್ ಪಿ ಸಿ 1973 ಕಲಂ 144 ರನ್ವಯ ಪ್ರತಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಿತೇಶ್ ಕೆ.ಪಾಟೀಲ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ  5 ಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಆಯೋಜಿಸುವುದು, ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದು

ಪ್ರಚೋದನಾತ್ಮಕ, ಉದ್ರೇಕಕಾರಿ ಹಾಡುಗಳು, ಕೂಗಾಟ,ತೇಜೋವಧೆ ಮಾಡುವಂತಹ ಚಿತ್ರಗಳು,ಚಿಹ್ನೆಗಳು, ಪ್ರತಿಕೃತಿಗಳನ್ನು ಪ್ರದರ್ಶಿಸುವದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕರ ಗಾಂಭೀರ್ಯ ಮತ್ತು ನೈತಿಕತೆಗೆ ಭಂಗ ತರುವಂತಹ ಯಾವುದೇ ಚಟುವಟಿಕೆಗಳನ್ನು ಪ್ರತಿಬಂಧಿಸಲಾಗಿದೆ.

ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *