ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೇಟಿನ್ ದೃಢಪಡಿಸಿದೆ.
ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕರೋನಾ ಸೋಂಕಿನಿಂದ ಸಾವಿನ್ನಪ್ಪಿದವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ-6258 ನೇ ಸೋಂಕಿತ ೭೦ ವರ್ಷದ ವೃದ್ಧ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಅವರು ಧಾರವಾಡಕ್ಕೆ ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿದ್ದ ಪ್ರಯಾಣದ ಹಿನ್ನಲೆಯನ್ನು ಹೊಂದಿದ್ದರು.
ಮೃತ ವೃದ್ದನನ್ನು ಹುಬ್ಬಳ್ಳಿಯ ಭೈರಿದೇವರಕೊಪ್ಪದ ಶಾಂತಿ ಕಾಲನಿ ನಿವಾಸಿ ಎಂದು ತಿಳಿದುಬಂದಿದೆ. ಇವರು ಮುಂಬೈನಿಂದ ಬರುವಾಗಲೇ ತೀವ್ರ ಉಸಿರಾಟದ ತೊಂದರೆಗೆ ಸಿಲುಕಿ ಅನಾರೋಗ್ಯಕ್ಕೆ ತುತ್ತಾಗಿದ್ದರು.
ಈ ಹಿನ್ನಲೆಯಲ್ಲಿ ಅವರನ್ನು ಜೂನ್ 9ರಂದು ನೇರವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಬಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಜೂನ್ 12ರಂದು ಸಾವನ್ನಪ್ಪಿದ್ದಾರೆ ಎಂದು ವಿವರಿಸಿದ್ದಾರೆ.