ಉತ್ತರಕನ್ನಡ prajakiran.com : ದ್ವೀತಿಯ ಪಿಯುಸಿ ಪರೀಕ್ಷೆ ರದ್ದಾದ ಹಿನ್ನೆಲೆ ಮನನೊಂದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಡಹಳ್ಳಿಯಲ್ಲಿ ನಡೆದಿದೆ.
ತಾಲೂಕಿನ ಯಡಹಳ್ಳಿ ಸಮೀಪದ ಸಹಸ್ರಳ್ಳಿಯ ನಿವಾಸಿ, ಮೂಲತಃ ಯಲ್ಲಾಪುರ ತಾಲೂಕಿನ ಹಿತ್ಲಳ್ಳಿಯ ಜಿ. ಧನ್ಯಾ (18) ಮೃತಪಟ್ಟ ವಿದ್ಯಾರ್ಥಿನಿ.
ಧನ್ಯಾ ಶಿರಸಿಯ ಮಾರಿಕಾಂಬಾ ಕಾಲೇಜಿನಲ್ಲಿ ದ್ವಿತೀಯ ಪಿ.ಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದಳು.
ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಶಿರಸಿ ಗ್ರಾಮಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.