ರಾಜ್ಯ

ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ, ಪತ್ನಿ, ಪುತ್ರನಿಗೂ ಸೋಂಕು…!




ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ರಾಜ್ಯದಲ್ಲಿ ಈವರೆಗೆ ಐವರು ಶಾಸಕರು ಹಾಗೂ ಒಬ್ಬ ಸಂಸದರಿಗೆ ವಕ್ಕರಿಸಿರುವ ಕರೋನಾ ಇದೀಗ ಆರನೇ ಶಾಸಕರಿಗೆ ಕರೋನಾ ಹರಡಿರುವುದು ದೃಢಪಟ್ಟಿದೆ.

ಕಲಬುರಗಿ ಜಿಲ್ಲೆಯ ಸೇಡಂ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ ತೇಲ್ಕೂರಅವರಿಗೆ ಕರೋನಾ ವ್ಯಾಪಿಸಿದೆ.

ಮೂರು ದಿನಗಳ ಹಿಂದೆಯಷ್ಟೇ ಅವರ ಆಪ್ತ ಕಾರ್ಯದರ್ಶಿಗೂ ಕರೋನಾ ಹಬ್ಬಿತ್ತು. ಅವರಿಗೆ ಕರೋನಾ ಬಂದ ಬೆನ್ನಲ್ಲೇ ಶಾಸಕರು ತಮ್ಮ ಗಂಟಲು ದ್ರವ ಮಾದರಿಯನ್ನು ಪರೀಕ್ಷಗೆನೀಡಿದ್ದರು.



ಅವರಿಗೂ ಕೋವಿಡ 19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಅವರೊಂದಿಗೆ ಪತ್ನಿ, ಪುತ್ರನಿಗೂ ಸೋಂಕು ತಗುಲಿದೆ.

ಈಗಾಗಲೇ ಮೂವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಲ್ಲದೆ, ಈ ಬಗ್ಗೆ ಸ್ವತಃ ಅವರೇ ದೂರವಾಣಿ ಮೂಲಕ ಖಚಿತಪಡಿಸಿದ್ದಾರೆ. ತಮ್ಮ ಸಂಪರ್ಕಿತರು ಕೂಡ ಸ್ವಯಂ ಪ್ರೇರಿತರಾಗಿ ತಪಾಸಣೆಗೆ ಒಳಗಾಗಬೇಕು ಎಂದು ಮನವಿ ಮಾಡಿದ್ದಾರೆ.



ಅವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕರನ್ನು ಆರೋಗ್ಯ ಇಲಾಖೆ ಪತ್ತೆ ಮಾಡುತ್ತಿದ್ದು, ಅವರನ್ನು ಹೋಂ ಕ್ವಾರಂಟಿನ್ ಹಾಗೂ ಗಂಟಲು ದ್ರವ ತಪಾಸಣೆಗೆ ಒಳಪಡಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಕಲಬರುಗಿ ಜಿಲ್ಲೆಯ ಸೇಡಂ ವಿಧಾನ ಸಭಾ ಕ್ಷೇತ್ರದಲ್ಲಿ ಕೂಡ ಕರೋನಾ ಅಟ್ಟಹಾಸ ದಿನದಿಂದ ದಿನಕ್ಕೆ  ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಕ್ಷೇತ್ರದ ಶಾಸಕರಿಗೂ ಕರೋನಾ ಹರಡಿರುವುದರಿಂದ ಜನತೆ ಇನ್ನಷ್ಟು ಆತಂಕಗೊಂಡಿದ್ದಾರೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *