ರಾಜ್ಯ

ಬಸವರಾಜ ಕೊರವರ ಮೇಲಿನ ರಾಜದ್ರೋಹ ಪ್ರಕರಣ ರದ್ದು ಮಾಡಿದ ಹೈಕೋರ್ಟ್

ಧಾರವಾಡ ಪ್ರಜಾಕಿರಣ.ಕಾಮ್ : ರಾಜ್ಯಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಲಕ್ಷಾಂತರ ಪೊಲೀಸರಿಗೆ ವಾರದ ರಜೆ, ಸಂಬಳ ಹೆಚ್ಚಳ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಹೊಂದಿರುವ ರಾಘವೇಂದ್ರ ಔರಾದಕರ್ ವರದಿ ಜಾರಿಗೆ ಆಗ್ರಹಿಸಿ ಅಂದು 2016ರಲ್ಲಿ ಪೊಲೀಸ ಕುಟುಂಬದ ಸದಸ್ಯರೊಂದಿಗೆ ಉಗ್ರ ಹೋರಾಟಕ್ಕೆ ಮುಂದಾಗಿದ್ದ ಪೊಲೀಸ್ ಹಕ್ಕುಗಳ ಹೋರಾಟಗಾರ ಬಸವರಾಜ ಕೊರವರ ಹಾಗೂ ಹಾವೇರಿಯ ಗುರುಪಾದಯ್ಯ ಹೊಂಗಲ್ ಮಠ ಅವರ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ಅಂದು ಧಾರವಾಡದ ಪೊಲೀಸರು ಕಲಾಭವನ ಮೈದಾನಕ್ಕೆ ಬರುವ ಮುನ್ನವೇ ಅವರನ್ನು ಬಂಧಿಸಿದ್ದರು.

ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇವರ ಮೇಲೆ ರಾಜದ್ರೋಹದ ಪ್ರಕರಣ ದಾಖಲಿಸಿ 86 ದಿನಗಳ ಕಾಲ ಇವರನ್ನು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.

ಕೊನೆಗೂ ಸರಕಾರದ ವಿರುದ್ದ ಜೈಲಿನಲ್ಲಿಯೇ ಹಲವು ದಿನಗಳ ಕಾಲ ಉಪವಾಸ ಸತ್ಯಾಗ್ರಹವನ್ನು ಕೈಗೊಂಡು ಸರಕಾರಕ್ಕೆ ಸೆಡ್ಡು ಹೊಡೆದಿದ್ದರು. ಕೊನೆಗೆ ಮನವೊಲಿಕೆ ನಂತರ ಹೋರಾಟ ಮೊಟಕುಗೊಳಿಸಿದ್ದರು.

86 ದಿನಗಳ ಬಳಿಕ ಜಾಮೀನು ಮೇಲೆ
ಹೊರಬಂದಿದ್ದರು.ಎಂಟು ವರ್ಷಗಳ ಕಾಲ ಸುದೀರ್ಘ ಕಾನೂನು ಹೋರಾಟದ ನಂತರ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದ ಪ್ರಕರಣದ ವಿರುದ್ದ ಹೈಕೋರ್ಟ್ ಮೊರೆ ಹೋಗಿದ್ದರು.

ರಾಜ್ಯ ಸರ್ಕಾರದ ರಾಜದ್ರೋಹ ಪ್ರಕರಣವನ್ನು ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ರಾಜದ್ರೋಹದ ಪ್ರಕರಣವನ್ನು ವಜಾಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.

ಅರ್ಜಿದಾರರ ಪರ ದೀಪಕ ಶೆಟ್ಟಿ ಬೆಳ್ಳಾಡಿ ವಾದಿಸಿದ್ದರು.

ಇದನ್ನು ಪೊಲೀಸ್ ಹಕ್ಕುಗಳ ಹೋರಾಟಗಾರ ಬಸವರಾಜ ಕೊರವರ ಮುಕ್ತಕಂಠದಿಂದ ಶ್ಲಾಘಿಸಿದ್ದು, ಪೊಲೀಸರ ನ್ಯಾಯಯುತ ಬೇಡಿಕೆಗಳ ಹೋರಾಟಕ್ಕೆ ತಡವಾಗಿಯಾದರೂ ಜಯ ದೊರಕಿದೆ.

ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ರಾಘವೇಂದ್ರ ಔರಾದಕರ್ ವರದಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಿ ಪೊಲೀಸರ ವಿವಿಧ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *