ರಾಜ್ಯ

ಧಾರವಾಡ : ಮನೆಯಿಂದಲೇ ಮತದಾನ ಮಾಡಿದ 1,998 ಮತದಾರರು

ಧಾರವಾಡ ಪ್ರಜಾಕಿರಣ.ಕಾಮ್  ಮೇ 02: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ 80 ವಯಸು ಮೇಲ್ಪಟ್ಟ ಮತ್ತು ವಿಶೇಷಚೇತನ ಮತದಾರರಿಗೆ ಅನುಕೂಲವಾಗಲು ಇದೇ ಮೊದಲ ಬಾರಿಗೆ ಪರಿಚಯಿಸಿ, ಜಿಲ್ಲಾಡಳಿತದಿಂದ ಅನುಷ್ಠಾನಗೊಳಿಸಿದ್ದ ಮನೆಯಿಂದಲೇ ಮತದಾನದಲ್ಲಿ ಒಟ್ಟು 1,998 ಜನ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮನೆಯಿಂದಲೇ ಮತದಾನ ಮಾಡಲು ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರಗಳಲ್ಲಿ ಆಯೋಗದ ನಮೂನೆ 12ಡಿಯನ್ನು ವೀತರಿಸಲಾಗಿತ್ತು.

80 ವಯಸು ಮೇಲ್ಪಟ್ಟ 1,686 ಜನರು ಮತ್ತು 392 ವಿಶೇಷಚೇತನ ಮತದಾರರು ಮನೆಯಿಂದಲೇ ಮತದಾನ ಮಾಡಲು ತಮ್ಮ ಒಪ್ಪಿಗೆ ನೀಡಿದ್ದರು.

ಆದರೆ ಕಳೆದ 3 ದಿನಗಳಲ್ಲಿ 1,615

80 ವಯಸ್ಸಿನ ಮೇಲ್ಪಟ್ಟ ಮತದಾರರು ಮತ್ತು 383 ವಿಶೇಷಚೇತನ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

12ಡಿ ನಮೂನೆ ಪಡೆದಿದ್ದ ಕೆಲವು ಮತದಾರರು ಸಾವು, ಮಾಹಿತಿ ನೀಡದೆ ಸ್ಥಳಾಂತರ, ಪರ ಊರಿಗೆ ಹೊಗಿದ್ದರಿಂದ ತಮ್ಮ ಹಕ್ಕು ಚಲಾಯಿಸಿಲ್ಲ.

80 ವಯಸು ಮೇಲ್ಪಟ ಮತ್ತು ವಿಶೇಷಚೇತನ ಮತದಾರರು, 69-ನವಲಗುಂದ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 430 ಮತ್ತು 70-ಕುಂದಗೋಳ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 135, 71-ಧಾರವಾಡ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 414 ಮತ್ತು 72-ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 233 ಮತ್ತು 73-ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 253 ಮತ್ತು 74-ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 416 ಮತ್ತು 75-ಕಲಘಟಗಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 117 ಜನ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ ಎಂದು  ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *