ಅಂತಾರಾಷ್ಟ್ರೀಯ

ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಇನ್ನಿಲ್ಲ

ನವದೆಹಲಿ prajakiran.com : ರಾಜ್ಯಸಭಾ ಸದಸ್ಯ, ಎಐಸಿಸಿ ಖಜಾಂಜಿಯಾಗಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಅವರು ಬುಧವಾರ ಬೆಳಗ್ಗೆ ವಿಧಿವಶರಾದರು.

ಅವರು ಬಹು ಅಂಗಾಂಗ ವೈಫಲ್ಯಗಳಿಂದ ಬಳಲುತ್ತಿದ್ದರು.
ಈ ಬಗ್ಗೆ ಟ್ವೀಟ್‌ ಮಾಡಿರುವ ಅಹ್ಮದ್ ಪಟೇಲ್ ಪುತ್ರ ಫೈಸಲ್ ಪಟೇಲ್, ನನ್ನ ತಂದೆ ಅಹ್ಮದ್ ಪಟೇಲ್ ಅವರು ಬುಧವಾರ ಬೆಳಗಿನ ಜಾವ 3:30ಕ್ಕೆ ಅಕಾಲಿಕ ನಿಧನ ಹೊಂದಿದರು ಎಂದು ಘೋಷಿಸಲು ವಿಷಾದಿಸುತ್ತೇನೆ ಎಂದು ನೋವು ಹಂಚಿಕೊಂಡಿದ್ದಾರೆ.

ಒಂದು ತಿಂಗಳ ಹಿಂದೆಯೇ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರು ಚೇತರಿಸಿಕೊಂಡಿದ್ದರು. ಅದಾದ ಬಳಿಕ ಅಂಗಾಂಗ ವೈಫಲ್ಯಗಳಿಂದಾಗಿ ನನ್ನ ತಂದೆಯವರ ಆರೋಗ್ಯ ಬಹಳಷ್ಟು
ಕ್ಷೀಣಿಸಿತ್ತು.

ಈ ವೇಳೆ ಕರೊನಾ ನಿಯಮಗಳನ್ನು ಪಾಲಿಸಬೇಕೆಂದು ನಾನು ಎಲ್ಲ ಹಿತೈಷಿಗಳನ್ನು ವಿನಂತಿಸುತ್ತೇನೆ. ಮತ್ತು ಎಲ್ಲಾ ಸಮಯದಲ್ಲೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ ಎಂದು ಫೈಸಲ್ ಪಟೇಲ್ ಮನವಿ ಮಾಡಿದ್ದಾರೆ.

ಅಹ್ಮದ್ ಪಟೇಲ್ ಅವರಿಗೆ ಅಕ್ಟೋಬರ್ 1 ರಂದು ಕರೋನಾ ಪಾಸಿಟಿವ್ ಆಗಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನ. 15 ರಂದು ಗುರುಗ್ರಾಮ್‌ನ ಮೆಡಂತಾ ಆಸ್ಪತ್ರೆಯ ಐಸಿಯು ಘಟಕಕ್ಕೆ ದಾಖಲಿಸಲಾಗಿತ್ತು.

ಗುಜರಾತ್‌ನಿಂದ ರಾಜ್ಯಸಭೆ ಪ್ರತಿನಿಧಿಸಿರುವ ಅವರು ಈ ಹಿಂದೆ ಎಂಟು ಬಾರಿ ಸಂಸದರಾಗಿದ್ದರು.

ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿರುವ ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಆಪ್ತರಾಗಿದ್ದ ಅವರು ಕಾಂಗ್ರೆಸ್ ನ ಖಜಾಂಚಿಯಾಗಿ ಪಕ್ಷವನ್ನು ಮುನ್ನಡೆಸಿದ್ದರು.
ಪಟೇಲ್ ನಿಧನಕ್ಕೆ ದೇಶದ್ಯಾಂತ ಕಾಂಗ್ರೆಸ್ ನಾಯಕರು ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *