ಅಪರಾಧ

ಧಾರವಾಡದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್, ಕಾರು, ಟ್ಯಾಂಕರ್ ನಡುವೆ ಸರಣಿ ಅಪಘಾತ ಒಬ್ಬ ಸಾವು, ಹಲವರಿಗೆ ಗಾಯ

ಧಾರವಾಡ prajakiran.com : ಧಾರವಾಡದ ರಾಷ್ಟ್ರೀಯ ಹೆದ್ದಾರಿಯಲ್ಲಿ (ತಪೋವನ ಬಳಿಯ ಬೈ ಪಾಸ್ ) ಟ್ರಕ್, ಕಾರು, ಟ್ಯಾಂಕರ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ‌.

ಈ ಅಪಘಾತದಲ್ಲಿ ಒಬ್ಬ ಸಾವನ್ಬಪ್ಪಿದ್ದು, ಹಲವರಿಗೆ ಗಂಭೀರವಾದ ಗಾಯಗಳಾಗಿವೆ.
ಟ್ರಕ್ ಹಾಗೂ ಕಾರು ಮಧ್ಯೆ ಡಿಕ್ಕಿ ಸಂಭವಿಸಿದ ನಂತರ ಟ್ಯಾಂಕರ್ ವಾಹನ ಡಿಕ್ಕಿ ಆಗಿ ಸರಣಿ ಅಪಘಾತ ಸಂಭವಿಸಿದೆ.

ಈ ಘಟನೆಯಲ್ಲಿ ಟ್ಯಾಂಕರ್ ವಾಹನ ಚಾಲಕ ಸಾವನ್ನಪ್ಪಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಅವರನ್ನು ಕೂಡಲೇ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ಮಾಹಿತಿ ಅರಿತು ಘಟನಾ
ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಸಂಚಾರಿ ಪೊಲೀಸರು ಮಾಹಿತಿ ಕಲೆ ಹಾಕಿ, ಮುಂದಿನ ಕ್ರಮ ಜರುಗಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *