ಡಿ.4 ರಿಂದ 22ರ ಸಂಸತ್ ಅಧಿವೇಶನ : ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾಹಿತಿ
ನವದೆಹಲಿ ಪ್ರಜಾಕಿರಣ.ಕಾಮ್ : ಡಿಸೆಂಬರ್ 4 ರಿಂದ ಸಂಸತ್ ನ ಚಳಿಗಾಲದ ಅಧಿವೇಶನ ಆರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಮಾಹಿತಿ ಹಂಚಿಕೊಂಡಿರುವ ಪ್ರಲ್ಹಾದ ಜೋಶಿ, ಡಿಸೆಂಬರ್ 4 ರಿಂದ ಡಿಸೆಂಬರ್ 19 ರ ವರೆಗೂ ಒಟ್ಟೂ 15 ದಿನಗಳ ಕಾಲ ಸಂಸತ್ ಕಲಾಪ ನಡೆಯಲಿದೆ ಎಂದು ತಿಳಿಸಿದ್ದಾರೆ.
ಈ ಬಾರಿಯ ಅಧಿವೇಶನದ ಸಂದರ್ಭದಲ್ಲಿಯೂ ದೇಶದ ಹಿತದೃಷ್ಟಿಯಿಂದ, ಉತ್ತಮ ಆಡಳಿತದ ಹಿತಾಸಕ್ತಿಯೊಂದಿಗೆ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.