ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿಗೆ ಮತ್ತೆ ತೀವ್ರ ಹಿನ್ನಡೆ

*ಮಾಜಿ ಸಚಿವ ವಿನಯ ಕುಲಕರ್ಣಿ ಅರ್ಜಿ ವಜಾ*

*ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ*

*ಮತ್ತೆ ಧಾರವಾಡ ಜಿಲ್ಲೆಯ ಪ್ರವೇಶ ಕೋರಿ ಅರ್ಜಿ ಸಲ್ಲಿಸಿದ್ದ ವಿನಯ ಕುಲಕರ್ಣಿ*

*ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಮಹತ್ವದ ಆದೇಶ*

ಬೆಂಗಳೂರು ಪ್ರಜಾಕಿರಣ.ಕಾಮ್ : ಮಾಜಿ ಸಚಿವ ವಿನಯ ಕುಲಕರ್ಣಿ ಮತ್ತೆ ಧಾರವಾಡ ಜಿಲ್ಲೆಯ ಪ್ರವೇಶ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಯಲ್ಲಿ ತಮ್ಮ ಮತ ಚಲಾಯಿಸಲು ತಮಗೆ ಮತ್ತೆ ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಕೋರಿ ಅವರು ಅರ್ಜಿಯನ್ನು ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಅವರ ಅರ್ಜಿ ವಜಾಗೊಳಿಸಿದೆ.

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಪಂ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಸಿಬಿಐ ತನಿಖೆ ವೇಳೆ ಹಲವಾರು ಮಹತ್ವದ ಅಂಶಗಳನ್ನು ಪತ್ತೆ ಮಾಡಿದ ಸಿಬಿಐ
ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಸಾಕ್ಷಿ ನಾಶ ಹಾಗೂ ಕೊಲೆ ಮಾಡಿದಂತಹ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿದ ಕುರಿತಂತೆ ಸುಮಾರು ಹತ್ತು ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಸಲ್ಲಿಸಿದೆ.

ಈ ಹಿನ್ನೆಲೆಯಲ್ಲಿ ಮತ್ತೆ ಧಾರವಾಡ ಜಿಲ್ಲೆಯ ಪ್ರವೇಶ ನಿರಾಕರಿಸಿದ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಈ ಮಹತ್ವದ ಆದೇಶ ಹೊರಡಿಸಿದರು.

ಕಳೆದ ಬಾರಿ ಲೋಕಸಭಾ ಚುನಾವಣೆ ವೇಳೆ ಹೈಕೋರ್ಟ್ ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಧಾರವಾಡ ಜಿಲ್ಲೆಯ ಪ್ರವೇಶ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದು ಮಾಜಿ ಸಚಿವ ವಿನಯ ಕುಲಕರ್ಣಿಗೆ ಮತ್ತೆ ತೀವ್ರ ಹಿನ್ನಡೆಯಾದಂತಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *