ಜಿಲ್ಲೆ

ಧಾರವಾಡದ ಹಿರಿಯ ಕಾಂಗ್ರೆಸ್ ನಾಯಕಿ ಡಾ. ಶಾಂತಾ ಹಲಗಿ ನಿಧನ

ಧಾರವಾಡ prajakiran.com : ಧಾರವಾಡದ ಹಿರಿಯ ಕಾಂಗ್ರೆಸ್ನಾಯಕಿ ಡಾ. ಶಾಂತಾ ಹಲಗಿ (67) ಬುಧವಾರ ನಿಧನ ಹೊಂದಿದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ. ಹಲಗಿ ಧಾರವಾಡದ ನಿವಾಸದಲ್ಲಿ ಇಹಲೋಕ ತ್ಯಜಿಸಿದರು.

ಅವರು ಚಲನಚಿತ್ರ ಸೆನ್ಸಾರ್ ಮಂಡಳಿ ಪ್ರಾದೇಶಿಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಅಲ್ಲದೆ, ಸಮಾಜ ಕಲ್ಯಾಣ ಸಲಹಾ ಮಂಡಳಿ, ಮದ್ಯಪಾನ ಸಂಯಮ ಮಂಡಳಿ, ರಾಜ್ಯ ಮಹಿಳಾ ಆಯೋಗಗಳಿಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಆರಂಭ ಮಾಡಿದ್ದ ಹಲಗಿ ಅವರು
ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.

ರಾಜ್ಯ ಮತ್ತು ಕೇಂದ್ರದಲ್ಲಿ ಅನೇಕ ಹುದ್ದೆಗಳನ್ನು ನಿರ್ವಹಿಸಿದ್ದ ಹಿರಿಯ ನಾಯಕಿಯಾಗಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *