ರಾಜ್ಯ

ಧಾರವಾಡದಲ್ಲಿ ೧೯೩ ಕ್ಕಿಂತ ಹೆಚ್ಚು ಕರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಧಾರವಾಡ prajakiran.com : ಕೊರೊನಾ ಸೋಂಕು ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಕೈ ಜೋಡಿಸಿವೆ. ೧೯೩ ಕ್ಕಿಂತ ಹೆಚ್ಚು ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ  ಮಾತನಾಡಿದರು.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ನೀಡಿ, ತಮ್ಮ ಆಸ್ಪತ್ರೆಯ ಅರ್ಧದಷ್ಟು ಹಾಸಿಗೆಗಳನ್ನು ಒದಗಿಸಿವೆ. ಈಗಾಗಲೇ ೧೯೩ ಕ್ಕಿಂತ ಹೆಚ್ಚು ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿರುವುದು ಸಮಾಧಾನದ ಸಂಗತಿಯಾಗಿದೆ ಎಂದರು.

ಹುಬ್ಬಳ್ಳಿ ಅಶೋಕ ಆಸ್ಪತ್ರೆಯ ಮಾಲೀಕರು ಕೋವಿಡ್-೧೯ ಚಿಕಿತ್ಸೆಗಾಗಿ ತಮ್ಮ ಆಸ್ಪತ್ರೆಯನ್ನು ಪೂರ್ಣಪ್ರಮಾಣದಲ್ಲಿ ನೀಡಲು ಮುಂದೆ ಬಂದಿದ್ದಾರೆ. ಇದು ಉತ್ತಮ ಬೆಳವಣಿಗೆಯಾಗಿದೆ.

ವೈದ್ಯರ ಮತ್ತು ವೈದ್ಯಕೀಯ ಸಂಸ್ಥೆಗಳ ವೃತ್ತಿಪರ, ಸಾಮಾಜಿಕ ಕಳಕಳಿ ಮತ್ತು ಉದಾರತೆ ಒರೆಗೆ ಹಚ್ಚಲು ಇದು ಉತ್ತಮ ಸಮಯ. ಎಲ್ಲ ವೈದ್ಯರು ಸ್ವಯಂ ಪ್ರೇರಣೆಯಿಂದ ಕೊರೊನಾ ಚಿಕಿತ್ಸೆ ಹಾಗೂ ನಿಯಂತ್ರಣಕ್ಕೆ ಸಹಕಾರ ನೀಡಬೇಕೆಂದು ಸಚಿವರು ತಿಳಿಸಿದರು.

ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಲಾಕ್‌ಡೌನ್ ಹಾಗೂ ಇತರ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರದ ಪ್ರಯತ್ನಗಳಿಗೆ ಸಾರ್ವಜನಿಕರ ಸಹಕಾರ ಮುಖ್ಯ. ನಾಗರಿಕರು ಸ್ವಯಂ ನಿರ್ಬಂಧ ಹಾಕಿಕೊಂಡು ಅನಗತ್ಯವಾಗಿ ಹೊರಗೆ ತಿರುಗಾಡುವುದನ್ನು ಕೈಬಿಡಬೇಕು ಎಂದರು.

 ಕೋವಿಡ್-೧೯ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರವೂ ಮುಖ್ಯ. ಹಗಲು-ಇರುಳು ಎನ್ನದೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಿಮ್ಸ್ ವೈದ್ಯರು, ಸಿಬ್ಬಂದಿ ಶ್ರಮಿಸುತ್ತಿದ್ದಾರೆ.

ಇದಕ್ಕೆ ಸಂಘ ಸಂಸ್ಥೆಗಳು, ಸ್ವಯಂ ಸೇವಕರು ಮತ್ತು ಸಾರ್ವಜನಿಕರು ಸಹಕಾರ ನೀಡಿ, ಜಾಗೃತಿ ಮೂಡಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *