ಸಿನಿಮಾ

ಹಿರಿಯ ನಟ ಶಿವರಾಂ ಇನ್ನು ನೆನಪು ಮಾತ್ರ…..!

ಹಿರಿಯ ನಟ ಶಿವರಾಂ ಅಗಲಿಕೆ ಸಿಎಂ ಸೇರಿ ಚಿತ್ರರಂಗದ ಗಣ್ಯರ ಕಂಬನಿ

ಬೆಂಗಳೂರು prajakuran.com : ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರು ಶನಿವಾರ ವಿಧಿವಶರಾದರು.

ಅವರು ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು.

ಕನ್ನಡ ಚಿತ್ರರಂಗಕ್ಕೆ ಶಿವರಾಂ ಅವರ ಕೊಡುಗೆ ಅನನ್ಯ. ಆರು ದಶಕಗಳ ಸುದೀರ್ಘ ವೃತ್ತಿ ಜೀವನದಲ್ಲಿ ಸಹಾಯಕ ನಿರ್ದೇಶಕರಾಗಿ, ನಿರ್ಮಾಪಕರಾಗಿ, ನಟರಾಗಿ ಕಾರ್ಯನಿರ್ವಹಿಸಿದ್ದಾರೆ.

ಪುಟ್ಟಣ್ಣ ಕಣಗಾಲ್ ನಿರ್ದೇಶನದ ಶರಪಂಜರ, ಶುಭ ಮಂಗಳ, ನಾಗರಹಾವು ಸೇರಿದಂತೆ ಹಲವಾರು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಮನೋಜ್ಞ ಅಭಿನಯ ನೀಡಿ ಕನ್ನಡಿಗರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ.

ಪುನೀತ್ ರಾಜ್‍ಕುಮಾರ್ ಅವರ ನಿಧನದ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಬ್ಬ ಮೇರುನಟನನ್ನು ಕಳೆದುಕೊಂಡಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

ಶಿವರಾಂ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಚಿತ್ರರಂಗದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಪಾರ ಅಭಿಮಾನಿಗಳು ಹಾಗೂ ಕುಟುಂಬವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *