ಧಾರವಾಡ prajakiran.com : ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಚಪ್ಪಲಿ ಅಂಗಡಿವೊಂದು ಸುಟ್ಟು ಲಕ್ಷಾಂತರ ರೂಪಾಯಿ ಸಂಭವಿಸಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ.
ನಗರದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಚಪ್ಪಲಿ ಅಂಗಡಿಯಲ್ಲಿ ಕಳೆದ ರಾತ್ರಿ ಈ ದುರಂತ ಸಂಭವಿಸಿದೆ.
ರಾಜು ಬಳ್ಳಾರಿ ಎಂಬುವವರಿಗೆ ಸೇರಿದ ಚಪ್ಪಲ ಅಂಗಡಿ, ಇದಾಗಿದ್ದು, ಇದರಿಂದಾಗಿ ಸುಮಾರು 2 ಲಕ್ಷಕ್ಕೂ ಹೆಚ್ಚು ವಸ್ತುಗಳು ಸುಟ್ಟ ಭಸ್ಮವಾಗಿದೆ ಎಂದು ಅಂಗಡಿ ಮಾಲೀಕ ಅಳಲು ತೋಡಿಕೊಂಡಿದ್ದಾನೆ.
ಕಳೆದ ತಡರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಈ ಅಗ್ನಿ ಆಕಸ್ಮಿಕ ಸಂಭವಿಸಿದೆ ಎಂದು ಅವರು ವಿವರಿಸಿದ್ದಾರೆ. ಇದರಿಂದಾಗಿ ದಿಕ್ಕೆ ತೋಚದಂತಾಗಿದೆ ಎಂದು ಕಣ್ಣೀರು ಹಾಕಿದ್ದಾರೆ.