ರಾಜ್ಯ

ವಿದ್ಯುತ್ ತಂತಿಯಿಂದ ಅವಘಡ : ಧಾರವಾಡದ ಕಮಲಾಪುರ ರೈತನ 9 ಎಕರೆ ಕಬ್ಬು ಸುಟ್ಟು ಕರಕಲು ..!

ಧಾರವಾಡ prajakiran.com :ವಿದ್ಯುತ್ ತಂತಿಯಿಂದ ಬೆಂಕಿ ಅವಘಡ ಸಂಭವವಿದ ಪರಿಣಾಮ 9 ಎಕರೆ ಕಬ್ಬು ಹಾಗೂ 25 ಮಾವಿನ ಮರ ಸುಟ್ಟು ಭಸ್ಮವಾದ ಘಟನೆ ಧಾರವಾಡ ತಾಲೂಕಿನಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ದಡ್ಡಿ ಕಮಲಾಪುರದ ರೈತ ಅಶೋಕ ಮಾನೆ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಈ ದುರಂತ ಸಂಭವಿಸಿದೆ.

ಲಾವಣಿ ಪಡೆದು ಬೆಳೆ ಬೆಳೆದಿದ್ದ ರೈತ ನಾಗರಾಜ್ ಕುಲಕರ್ಣಿ ಜಮೀನಿನ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿ
ತಂತಿಗಳು ಜೋತು ಬಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಜರುಗಿದೆ.

ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *