ರಾಜ್ಯ

ತಾರಕಕ್ಕೇರಿದ ಸಿದ್ದರಾಮಯ್ಯ-ನಳೀನಕುಮಾರ್ ಕಟೀಲ್ ಟ್ವೀಟ್ ವಾರ್…!?

ಬೆಂಗಳೂರು prajakiran.com : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಅವರ ಟ್ವೀಟ್ ವಾರ ತಾರಕಕ್ಕೇರಿದೆ.

ಪರಸ್ಪರ ಒಬ್ಬರಿಗೊಬ್ಬರು ಟ್ವೀಟರ್ ನಲ್ಲಿಯೇ ಕಾಲೆಳೆದುಕೊಂಡಿದ್ದು, ಅವರಅಭಿಮಾನಿಗಳು ಕೂಡ ಪರಸ್ಪರ ಟ್ವೀಟ್, ರಿಟ್ವೀಟ್ ಮಾಡಿ ತಿರುಗೇಟು ಕೊಟ್ಟಿದ್ದಾರೆ.

ಅವರ ಟ್ವೀಟ್ ಗಳ ವಿವರ ಹೀಗಿದೆ ನೋಡಿ…

ನಳೀನಕುಮಾರ್ ಕಟೀಲ್ ಅವರು, ಅಯ್ಯೊ @siddaramaiahನವರೆ, ಹಿಂದುಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ. ಎಸ್ ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದವರು ಯಾರು ಎಂಬುದು ಹಿಂದುಗಳು ಮರೆತಿಲ್ಲ.

ನೀವು ಜಾತಿ- ಧರ್ಮಗಳ ಹೆಸರಿನಲ್ಲಿ ಜನರನ್ನು ಒಡೆದು ಆಳಲು ಪ್ರಯತ್ನಿಸಿದ್ದು ಗುಟ್ಟಾಗೇನೂ ಉಳಿದಿಲ್ಲ ಎಂದು ಕುಟುಕಿದ್ದಾರೆ.

ಅದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, @nalinkateel ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದು ಗುಡುಗಿದ್ದಾರೆ.

ಅಲ್ಲದೆ, ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ?

ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ?.ಹಿಂದುಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ

@nalinkateelಅವರೇ, ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳು ಯಾರೆಂದು ತಿಳಿಸುವಿರಾ? ಎಂದು ಕುಟುಕಿದ್ದಾರೆ.

ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ @nalinkateelಅವರೇ, ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಹಿಂದು ಪರೇಶ್ ಮೇಸ್ತನ ಕುಟುಂಬಕ್ಕೆ ನ್ಯಾಯ ಯಾವಾಗ ಕೊಡಿಸುವಿರಿ?  ಎಂದು ಕಾಲು ಎಳೆದಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ ಎಂದು ವ್ಯಂಗ್ಯವಾಡಿದ್ದಾರೆ.

ಅಲ್ಲದೆ, @nalinkateel? 2013-18ರ ಅವಧಿಯಲ್ಲಿ ಕೋಮುಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ 10 ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ,ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ? ಎಂದು ತಿರುಗೇಟು ನೀಡಿದ್ದಾರೆ.

@nalinkateelಅವರೇ, 2013-18ರ ಅವಧಿಯಲ್ಲಿ 24 ಹಿಂದುಗಳ ಹತ್ಯೆಯಾಗಿದೆ ಎಂದು ಹೇಳಿದ್ದೀರಿ. ಕೋಮುಸಂಘರ್ಷದಲ್ಲಿ ಹತ್ಯೆಗೀಡಾದವರು 24 ಅಲ್ಲ, ಹಿಂದು-ಮುಸ್ಲಿಮ್ ಸೇರಿ ಒಟ್ಟು 45. ಈ ಪ್ರಕರಣಗಳನ್ನು ದಾಖಲೆ ಸಮೇತ ವಿವರಿಸಿ ನಮ್ಮ ಪಕ್ಷ ಪ್ರಕಟಿಸಿದ ಪುಸ್ತಕವನ್ನು ಓದಿ ನಿಮ್ಮ ಮನಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ ಎಂದು ಸಮರ ಸಾರಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ನಳೀನಕುಮಾರ ಕಟೀಲ್, ಸಿದ್ದರಾಮಯ್ಯ ಹಿಂದುಳಿದ ವರ್ಗಳ ನಕಲಿ ನಾಯಕ ಎಂದು ಛೇಡಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *