ಎಸಿಬಿಯನ್ನು ವಿರೋಧ ಪಕ್ಷದಲ್ಲಿರುವಾಗಲೇ ವಿರೋಧಿಸಿದ್ದ ಬಿಜೆಪಿ
ಬೆಂಗಳೂರು prajakiran.com : ರಾಜ್ಯ ಸರ್ಕಾರದ ಹಲವಾರು ಸಚಿವರುಗಳ ವಿರುದ್ಧ ಭ್ರಷ್ಟಾಚಾರದ ದೂರುಗಳನ್ನು ನೀಡಿದರೂ ತನಿಖಾ ಸಂಸ್ಥೆಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಬಿಜೆಪಿ ನಿಷ್ಕ್ರಿಯವಾಗಿದೆ. ಎಸಿಬಿಯನ್ನು ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾಗಲೇ ವಿರೋಧಿಸಿದ್ದರು.
ಈಗ ಅದರ ಅಸ್ತಿತ್ವವನ್ನೇ ಇಲ್ಲವಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಈ ತನಿಖಾ ಸಂಸ್ಥೆಗಳು ಕೇವಲ ನಾಮಕಾವಾಸ್ತೆ ಎನ್ನುವಂತೆ ಭಾಸವಾಗುತ್ತದೆ ಎಂದು ಕಿಡಿಕಾರಿದ್ದಾರೆ.