siddu tested possitive
ರಾಜ್ಯ

ಬಿಜೆಪಿಯ ಗ್ರಾಮ ಸ್ವರಾಜ್ಯ ಅಭಿಯಾನಕ್ಕೆ ಸಿದ್ದರಾಮಯ್ಯ ಲೇವಡಿ

ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ಮಹಾತ್ಮ ಗಾಂಧಿಯವರು ಜಾರಿಗೆ ತಂದಿರುವ ಗ್ರಾಮ ಸ್ವರಾಜ್ಯ ಪರಿಕಲ್ಪನೆಯನ್ನು ಬಿಜೆಪಿಯವರು ಈಗ ರಾಜಕೀಯ ಲಾಭಕ್ಕಾಗಿ ನಾವು ಜಾರಿಗೆ ತಂದಿದ್ದೇವೆ ಎಂದು ಬಿಂಬಿಸುತ್ತಿದ್ದಾರೆ ಎಂದು ಬಿಜೆಪಿಯ ಗ್ರಾಮ ಸ್ವರಾಜ್ಯ ಅಭಿಯಾನಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಅವರು ನಗರದಲ್ಲಿಂದು ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿ, ಗ್ರಾಮ ಪಂಚಾಯತ್ ವ್ಯವಸ್ಥೆ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ.

ಗ್ರಾಮದ ಆಡಳಿತ ಜನರ ಕೈಯಲ್ಲಿ ಇರಬೇಕೆಂದು ಈ ವ್ಯವಸ್ಥೆ ಜಾರಿಗೆ ತಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿಯವರು ಯಾವತ್ತೂ ರಾಜಕೀಯ ಮೀಸಲಾತಿ ಪರವಾಗಿದ್ದವರಲ್ಲ ಎಂದು ಕಿಡಿಕಾರಿದರು.

ರಾಜಕೀಯ ಮೀಸಲಾತಿ ಕಾಂಗ್ರೆಸ್ ಕೊಡುಗೆಯಾಗಿದೆ. ಬಿಜೆಪಿಯವರಿಗೆ ಅಧಿಕಾರ ವಿಕೇಂದ್ರೀಕರಣ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಲ್ಲ. ಗ್ರಾಮ ಸ್ವರಾಜ್ಯ ಕಾಂಗ್ರೆಸ್​​ನ ಕೂಸು, ಅದು ಬಿಜೆಪಿಗೆ ಸಂಬಂಧವಿಲ್ಲ ಎಂದರು.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯುತ್ತದೆ. ಹಣ ಚೆಲ್ಲಿ, ಅಧಿಕಾರ ದುರುಪಯೋಗಪಡಿಸಿಕೊಂಡು ಬಿಜೆಪಿಯವರು ತಿಪ್ಪರಲಾಗ ಹಾಕಿದರೂ ಬಹುಮತ ಪಡೆಯಲು ಸಾಧ್ಯವಿಲ್ಲ ಎಂದರು.

ಗ್ರಾಮ ಪಂಚಾಯತಿ ಸೀಟ್ ಹರಾಜು ವಿಷಯದ ಕುರಿತು ಮಾತನಾಡಿದ ಅವರು, ಗ್ರಾಮ ಪಂಚಾಯತಿಯಲ್ಲಿ ಸೀಟು ಹರಾಜು ಹಾಕಬಾರದು.

ಅದು ಕಾನೂನು ಬಾಹಿರ. ಹೀಗೆ ಮಾಡಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಕಬೇಕು. ಇದಕ್ಕೆ ಬಿಜೆಪಿ ಕಾರಣ ಎಂದು ಆರೋಪಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *