ರಾಜ್ಯ

ಜೆಡಿಎಸ್ ಗೆ ಯಾವಾಗಲೂ ಕಾಂಗ್ರೆಸ್ ಟಾರ್ಗೇಟ್ ಎಂದ ಸಿದ್ದರಾಮಯ್ಯ

ಆರ್.ಎಸ್.ಎಸ್ ಕೋಮುವಾದಿ ಸಂಘಟನೆ: ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ

ಹುಬ್ಬಳ್ಳಿ: ಆರ್.ಎಸ್.ಎಸ್ ಎನ್ನುವುದು ಕೋಮುವಾದಿ ಸಂಘಟನೆ. ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವಂತದ್ದು, ಆರ್.ಎಸ್.ಎಸ್ ನ ಕೆಲಸ.

ಅಲ್ಲದೇ ಹಿಂದೂಗಳನ್ನು ಮುಸ್ಲಿಂರ ವಿರುದ್ಧ ಎತ್ತಿ ಕಟ್ಟುವುದು ಹಾಗೂ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಾಣ ಮಾಡುವ ಕೆಲಸವನ್ನು ಮೊದಲಿನಿಂದಲೂ ಮಾಡುತ್ತಿದ್ದಾರೆ.

ಆದರೆ ಕಾಂಗ್ರೆಸ್ ಪಕ್ಷ ಅದರಲ್ಲಿ ಯಾವುದೇ ನಂಬಿಕೆ ಇಟ್ಟುಕೊಂಡಿಲ್ಲ. ಎಲ್ಲ ಧರ್ಮದವರನ್ನು ನಾವು ಗೌರವಿಸುತ್ತೇವೆ ಎಂದು ವಿಪಕ್ಷ ನಾಯಕ‌ ಸಿದ್ಧರಾಮಯ್ಯ ಆರ್.ಎಸ್.ಎಸ್ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದರು.

ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಆರ್.ಎಸ್.ಎಸ್ ಮುಖವಾಡವೇ ಬಿಜೆಪಿ. ಆರ್.ಎಸ್.ಎಸ್ ನವರು ಏನು ನಿರ್ದೇಶನ ಕೊಡ್ತಾರೆ ಅದನ್ನು ಬಿಜೆಪಿ ಮಾಡುತ್ತದೆ ಎಂದು ಅವರು ಕಿಡಿ ಕಾರಿದರು.

ದಿನದಿಂದ ದಿನಕ್ಕೆ ಅಗತ್ಯವಸ್ತುಗಳ ಬೆಲೆ ಗಗನಕ್ಕೇರುತ್ತಿವೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಹೊಣೆ. ಆದರೇ ರಾಜ್ಯ ಸರ್ಕಾರ ಇಲ್ಲಿ ತಮಟೆ ಹೊಡೆದುಕೊಂಡು ಕುಳಿತಿದ್ದಾರೆ ಎಂದರು.

ಇನ್ನೂ ಸಿದ್ಧರಾಮಯ್ಯ ದೆಹಲಿಯಲ್ಲಿ ಸೋನಿಯಾಗಾಂಧಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ರಾಜಕಾರಣ ಬಗ್ಗೆ ಚರ್ಚಿಸಲು ಭೇಟಿಯಾಗಿದ್ದೆ.

ಅಲ್ಲಿ ರಾಷ್ಟ್ರ ರಾಜಕಾರಣದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಸೋನಿಯಾ ಗಾಂಧಿ ರಾಷ್ಟ್ರ ರಾಜಕಾರಣಕ್ಕೆ ಕರೆದೂ ಇಲ್ಲ. ಆ ಬಗ್ಗೆ ಯಾವುದೇ ಚರ್ಚೆನೂ ಮಾಡಿಲ್ಲ ಎಂದು ಅವರು ದೆಹಲಿ ಭೇಟಿಯ ಸ್ಪಷ್ಟನೆ ನೀಡಿದರು.

ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ಗೆ ಯಾವಾಗಲೂ ಕಾಂಗ್ರೆಸ್ ಟಾರ್ಗೇಟ್.

ಬಸವಕಲ್ಯಾಣದಲ್ಲಿಯೂ ಇದೇ ತರ ಮಾಡಿದ್ದಾರೆ, ಹಾನಗಲ್ ಹಾಗೂ ಸಿಂದಗಿಯಲ್ಲಿ ಇದೇ ರೀತಿ ಮಾಡಿದ್ದಾರೆ.

ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಹಾಕುವುದಕ್ಕೆ ನಮ್ಮ ಅಭ್ಯಂತರವಿಲ್ಲ.
ಎಲ್ಲಿ ಕಣಕ್ಕಿಳಿಸಬೇಕೋ ಅಲ್ಲಿ ನಿಲ್ಲಿಸಿಲ್ಲ.

ಮಂಡ್ಯ, ಹಾಸನ ಮತ್ತಿತರ ಕಡೆಗಳಲ್ಲಿ ಅಲ್ಪಸಂಖ್ಯಾತರ ಅಭ್ಯರ್ಥಿಗಳನ್ನ ಹಾಕಲಿ ಎಂದ ಅವರು, ಇಲ್ಲಿ ಬಿಜೆಪಿಗೆ ಸಹಾಯವಾಗಲಿ ಅಂತಾ ಅಲ್ಪಸಂಖ್ಯಾತರನ್ನು ಕಣ್ಣಕ್ಕಿಳಿಸಿದ್ದಾರೆ ಎಂದರು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *