ಬೆಂಗಳೂರು prajakiran.com : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಳಿ ಬೇನಾಮಿ ಜಮೀನಿದ್ದು, ಅದನ್ನು ಉಳಿಸಿಕೊಳ್ಳಲು ಭೂ ಸುಧಾರಣೆ ಕಾಯ್ದೆಗೆ ಬೆಂಬಲ ನೀಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ರೈತ ಮುಖಂಡರ ಜತೆಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.
ಕುಮಾರಸ್ವಾಮಿ ಹತ್ತಿರ ಬೇನಾಮಿ ಭೂಮಿ ಇದ್ದು, ಇವರ ಎಲ್ಲ ಪ್ರಕರಣಗಳನ್ನು ರಾಜ್ಯ ಸರ್ಕಾರ ವಜಾ ಮಾಡಿದೆ. ಹೀಗಾಗಿ ಸರ್ಕಾರದ ಪರ ಕುಮಾರಸ್ವಾಮಿ ಇದ್ದಾರೆ ಎಂದು ಆರೋಪಿಸಿದರು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ಸೂಚಿಸಿರುವ ಕುಮಾರಸ್ವಾಮಿ ಅವರಿಗೆ ನಾಚಿಕೆಯಾಗಬೇಕು.
ತಮ್ಮ ಸ್ವಾರ್ಥಕ್ಕಾಗಿ ಕೃಷಿ ವಿರೋಧಿ ಮಸೂದೆಗೆ ಬೆಂಬಲ ಸೂಚಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದರು.