siddu tested possitive
ರಾಜ್ಯ

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ದ ಗುಡುಗಿದ ಸಿದ್ದರಾಮಯ್ಯ

ಬೆಂಗಳೂರು prajakiran.com :

ದೇಶದಲ್ಲಿ ಇಂದು ನಡೆಯುತ್ತಿರುವ ಜಾತ್ಯತೀತತೆ ಮತ್ತು ಕೋಮುವಾದದ ನಡುವಿನ ನಿರ್ಣಾಯಕ ಹೋರಾಟದಲ್ಲಿ ನಾವೆಲ್ಲಿ ನಿಂತಿದ್ದೇವೆ ಎನ್ನುವುದನ್ನು ಜನತೆಗೆ ತಿಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ.
ನಿತ್ಯ ನನ್ನ ವಿರುದ್ದ ನಂಜು ಕಾರುತ್ತಿರುವ @hd_kumaraswamy ಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ದ ಗುಡುಗಿದ್ದಾರೆ.

ಮಾನ್ಯ @hd_kumaraswamy ಯವರೇ, ನಿಮ್ಮದು ಜಾತ್ಯತೀತತೆಗೆ ಬದ್ಧವಾಗಿರುವ ಪಕ್ಷ ಎಂದು ಹೇಳುತ್ತಲೇ ಬಂದಿದ್ದೀರಿ.

ಹಾಗಿದ್ದರೆ, ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ? ಎಂದು ಸವಾಲು ಹಾಕಿದ್ದಾರೆ.

ವಚನಭಂಗದ ನಿಮ್ಮ ಇತಿಹಾಸವನ್ನು ಕಂಡ ನಾಡಿನ ಜನತೆ ಸುಲಭದಲ್ಲಿ ನಿಮ್ಮನ್ನು ನಂಬಲಾರರು.
ನಂಬಿಕೆ ಹುಟ್ಟಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಮ್ಮ ತಂದೆ @H_D_Devegowda ಅವರ ಮೇಲೆ ಆಣೆ ಮಾಡಿ ಘೋಷಿಸಲು ಸಿದ್ಧ ಇದ್ದೀರಾ @hd_kumaraswamy ಅವರೇ? ಎಂದು ಕುಟುಕಿದ್ದಾರೆ.

ಬಿಜೆಪಿ ಜೊತೆ ಎಂದೆಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನೀವು ಘೋಷಿಸಿಬಿಟ್ಟರೆ ನಿಮ್ಮ ಪಕ್ಷ ಬಿಜೆಪಿಯ ‘ಬಿ-ಟೀಮ್’ ಎಂಬ ಆರೋಪವನ್ನು ಕೂಡಾ ಸುಳ್ಳು ಎಂದು ಸಾಬೀತು ಮಾಡಿದಂತಾಗುತ್ತದೆ ಎಂದು ಸಲಹೆ ನೀಡಿದ್ದಾರೆ.
ನಿಮ್ಮ ಪಕ್ಷದ ಹೆಸರು ಕೂಡಾ ಅರ್ಥಪೂರ್ಣವಾಗುತ್ತದೆ. @hd_kumaraswamy
ಎಂದು ತುರುಗೇಟು ನೀಡಿದ್ದಾರೆ.

ಗೋಮುಖ ವ್ಯಾಘ್ರರೇ ಸುತ್ತ ಕುಣಿದಾಡುತ್ತಿರುವ ಈ ಸಂದರ್ಭದಲ್ಲಿ ಜನ ಪ್ರತಿಯೊಬ್ಬರನ್ನೂ ಸಂಶಯದಿಂದ ನೋಡುತ್ತಿದ್ದಾರೆ.

ಈ ಸಂದರ್ಭದಲ್ಲಿ ನಮ್ಮ ಅಸಲಿ ಮುಖವನ್ನು ಜನರ ಮುಂದೆ ತೆರೆದಿಟ್ಟು ಅವರ ವಿಶ್ವಾಸವನ್ನು ಗಳಿಸಿ, ನಮ್ಮ ಹೋರಾಟದಲ್ಲಿ ಅವರನ್ನು ತೊಡಗಿಸಿಕೊಳ್ಳಬೇಕಾಗಿದೆ. @hd_kumaraswamy ಎಂದು ವಿವರಿಸಿದ್ದಾರೆ.

ಉಳಿದುದೆಲ್ಲವನ್ನೂ ಪಕ್ಕಕ್ಕಿಟ್ಟು ನನ್ನ ವಿರುದ್ಧದ ವೈಯಕ್ತಿಕ ನಿಂದೆ, ವಿಕೃತ ಮನಸ್ಸಿನ ಹಳಹಳಿಕೆ ಮತ್ತು ಸುಳ್ಳುಗಳಿಂದ ಕೂಡಿದ ಅಭಿಯಾನವನ್ನೇ ನೀವು ಮುಂದುವರಿಸುವುದಾದರೆ ಹಾಗೆಯೇ ಮಾಡಿ @hd_kumaraswamy ಅವರೆ.

ಸಾರ್ವಜನಿಕ ಜೀವನದಲ್ಲಿರುವ ನಮ್ಮನ್ನು – ನಿಮ್ಮನ್ನು ಜನ ನೋಡಿದ್ದಾರೆ. ಅವರು ತೀರ್ಮಾನಿಸುತ್ತಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *