ಅಂತಾರಾಷ್ಟ್ರೀಯ

ಕರ್ನಾಟಕದಲ್ಲಿ ವ್ಯವಹರಿಸಲು ಕನ್ನಡದಲ್ಲಿ ನಾಮಫಲಕ ಹಾಕಿ : ಪ್ರಲ್ಹಾದ ಜೋಶಿ

ನವದೆಹಲಿ ಪ್ರಜಾಕಿರಣ.ಕಾಮ್ :    ಕರ್ನಾಟಕದಲ್ಲಿ ವ್ಯವಹಾರ ನಡೆಸುವ ಅಂಗಡಿ, ಉದ್ದಿಮೆಗಳ ಮಾಲೀಕರು ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಹಾಕಬೇಕು ಎಂದು ಕನ್ನಡ ಸಂಘಟನೆಗಳು ಹೋರಾಟಕ್ಕಿಳಿದಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವರು, ” ನನಗೆ ಬಂದಿರುವ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಕೆಲವು ಅಂಗಡಿಯವರು ಉದ್ದೇಶಪೂರ್ವಕವಾಗಿ ಕನ್ನಡ ಬೋರ್ಡ್ ಹಾಕಲು ಬಯಸುವುದಿಲ್ಲ. ಇದನ್ನು ನಾನು ಒಪ್ಪುವುದಿಲ್ಲ.

ಕರ್ನಾಟಕದಲ್ಲಿ ಬಹುಪಾಲು ಜನತೆ ಕನ್ನಡ ಮಾತನಾಡುವವರಿದ್ದಾರೆ. ಹೀಗಿರುವಾಗ, ಆಂಗ್ಲ ಮತ್ತು ಹಿಂದಿಯೊಂದಿಗೆ ಕನ್ನಡವನ್ನು ಸೇರಿಸುವಲ್ಲಿ ಅಂಗಡಿ ಮಾಲೀಕರಿಗೆ ಸಮಸ್ಯೆ ಏನು? ಈ ಬಗ್ಗೆ ಜನರು ಪ್ರಶ್ನಿಸಿದಾಗ ಕೆಲ ಉದ್ದಿಮೆಗಳ ಮಾಲೀಕರು ದುರಹಂಕಾರದಿಂದ ವರ್ತಿಸಿದ್ದಾರೆ.

ನಾನು ಹಿಂಸಾಚಾರವನ್ನು ಒಪ್ಪುವುದಿಲ್ಲ, ಆದರೆ ಅವರು ಕನ್ನಡ ನಾಮಫಲಕಗಳನ್ನು ಪ್ರದರ್ಶಿಸಲು ಹಿಂದೇಟು ಹಾಕೋದ್ಯಾಕೆ?

20-30% ಅಂಗಡಿಯವರು ಸಹ ಕನ್ನಡದಲ್ಲಿ ಬೋರ್ಡ್ ಹಾಕುವುದಿಲ್ಲ. ಇದು ತಪ್ಪು. ಇಂಗ್ಲೀಷ್ ನ ಜೊತೆಗೆ ಕನ್ನಡದಲ್ಲಿ ನಾಮಫಲಕ ಹಾಕಿದರೆ ತೊಂದರೆಯೇನು?

ಇದು ಬ್ರಿಟನ್ ಅಥವಾ ಇಂಗ್ಲೆಂಡ್ ಅಲ್ಲ. ಎಲ್ಲರಿಗೂ ಇಂಗ್ಲಿಷ್ ಭಾಷೆ ತಿಳಿಯುವುದಿಲ್ಲ, ಸಂಪೂರ್ಣವಾಗಿ ಇಂಗ್ಲಿಷ್ ನಲ್ಲಿ ಮಾತ್ರವೇ ನಾಮಫಲಕ ಹಾಕೋದ್ಯಾಕೆ?

ಇದನ್ನ ಅಂಗಡಿಯವರು ಅರ್ಥಮಾಡಿಕೊಳ್ಳಬೇಕು. ಎಲ್ಲಾ ಅಂಗಡಿಗಳ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಇರಲೇಬೇಕು.

ಇದನ್ನ ಅಂಗಡಿಗಳ ಮಾಲೀಕರು ಪಾಲಿಸಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈ ವಿಚಾರವಾಗಿ ನಡೆಯುತ್ತಿರುವ ಹಿಂಸೆಯನ್ನು ನಾನು ಒಪ್ಪುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *